ಶಿವಮೊಗ್ಗ: ಬೇಸಿಗೆ ಬಿಸಿಲು ಹೆಚ್ಚಿರುವುದರಿಂದ ಕೆಎಫ್ಡಿಗೆ (ಮಂಗನ ಕಾಯಿಲೆ) ಕಾರಣವಾಗುವ ಉಣುಗು ಹೆಚ್ಚಳಗೊಳ್ಳಲಿವೆ. ಹೀಗಾಗಿ ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಕಾಡಿಗೆ ಹೋಗುವುದು ಹಾಗೂ ಕಾಡಿನ ಒಣ ಎಲೆಗಳನ್ನು (ದರಗು) ಸಂಗ್ರಹಿಸುವುದನ್ನು ನಿಲ್ಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಕಾಡಿನಲ್ಲಿ ಅಥವಾ ತೋಟಗಳಲ್ಲಿ ಮಂಗಗಳು ಅಸಹಜವಾಗಿ ಮೃತಪಟ್ಟಿರುವುದು ಕಂಡು ಬಂದಲ್ಲಿ ತಕ್ಷಣ ಅರಣ್ಯ ಇಲಾಖೆ ಇಲ್ಲವೇ ಸ್ಥಳೀಯ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡುವಂತೆ ಡಿಎಚ್ಒ ಡಾ.ಕೆ.ಎಸ್.ನಟರಾಜ್ ಕೋರಿದ್ದಾರೆ.

ಜಿಲ್ಲೆಯ ಮಲೆನಾಡು ಭಾಗದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಕೆಎಫ್ಡಿ ಪ್ರಕರಣ ವರದಿಯಾಗುತ್ತಿವೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ತಿಳಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರುಳಿ, ಮೇಗರವಳ್ಳಿ, ಕಟಗಾರು, ಹಾರೋಗುಳಿಗೆ, ಯೋಗಿಮಠ, ಮಾಳೂರು, ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ, ಹೊಸನಗರ ತಾಲ್ಲೂಕಿನ ಸೊನಲೆ, ಹುಂಚ, ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ ಹಾಗೂ ಸಾಗರ ತಾಲ್ಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ, ಮಂಜಿನಕಾನು ಗ್ರಾಮಗಳಲ್ಲಿ ಕೆಎಫ್ಡಿ ಪ್ರಕರಣ ವರದಿಯಾಗುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-42-1831085984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.