ಸೋಮವಾರಪೇಟೆ: ಇಲ್ಲಿನ ವಲಯ ಅರಣ್ಯ ಇಲಾಖೆಯಿಂದ ಟೈಗರ್ಸ್ ಔಟ್ ಸೈಡ್ ಟೈಗರ್ಸ್ ರಿಸರ್ವ್ ಎಂಬ ಯೋಜನೆಯಡಿಯಲ್ಲಿ 2025-26ನೇ ವರ್ಷದ ಕಾರ್ಯಕ್ರಮದಲ್ಲಿ ಕಾಡಂಚಿನಲ್ಲಿ ಬರುವ ಗ್ರಾಮಗಳ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರವನ್ನು ಈಚೆಗೆ ವಿತರಿಸಲಾಯಿತು.

ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ವಿತರಿಸಿದರು.

ನಂತರ ಮಾತನಾಡಿದ ಅವರು, ‘ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ನೀಡಬೇಕು. ಯೋಜನೆಗಳನ್ನು ಪಡೆದ ಜನರು ಅದನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದರು.

ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್ ಎಫ್ ಒ ಶೈಲೇಂದ್ರಕುಮಾರ್, ಶನಿವಾರಸಂತೆ ಪೂಜಾಶ್ರೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-1911565227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.