ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮಿಷಕ್ಕೆ ಒಳಗಾಗದಿರಿ

Last Updated 15 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಮತ್ತೆ ಚುನಾವಣೆ ಬಂದಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುವನ್ನು ಆಯ್ಕೆ ಮಾಡುತ್ತಾರೆ. ಆದರೆ ಮತದಾನ ಮಾಡುವ ಪ್ರಜೆ ಜಾಗೃತನಾಗಿ ವಿವೇಕದಿಂದ ತನ್ನ ಹಕ್ಕನ್ನು ಚಲಾಯಿಸಿದಾಗ ಮಾತ್ರ ಪ್ರಜೆಯೇ ಪ್ರಭುವಾಗುತ್ತಾನೆ. ಆ ಶಕ್ತಿಗಾಗಿಯೇ ಚುನಾವಣೆಗೆ ಅಭ್ಯರ್ಥಿಗಳು ಮತದಾರರನ್ನು ಓಲೈಸುತ್ತಾರೆ ಮತ್ತು ತಮ್ಮ ಪಕ್ಷದ ಪ್ರಣಾಳಿಕೆಗಳ ಮೂಲಕ ಮತ ಯಾಚಿಸುತ್ತಾರೆ. ಈ ಶಕ್ತಿಯನ್ನು ಜ್ಞಾಪಿಸಿಕೊಂಡು ಪ್ರತಿಯೊಬ್ಬ ಮತದಾರನೂ ತನ್ನ ಹಕ್ಕನ್ನು ಚಲಾಯಿಸಬೇಕು.

ಮತದಾನ ಪವಿತ್ರ ಹಕ್ಕು ಮತ್ತು ಕರ್ತವ್ಯವಾಗಿದೆ. ಯಾವುದೇ ಆಮಿಷಕ್ಕೆ ಒಳಗಾಗದೆ ಚುನಾವಣೆಯ ದಿನ ಪ್ರತಿಯೊಬ್ಬರೂ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು.

– ಡಿ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT