ಶುಕ್ರವಾರ, ಸೆಪ್ಟೆಂಬರ್ 17, 2021
30 °C

ವಿಮಾನದಲ್ಲಿ ಸಾಕುಪ್ರಾಣಿಗಳು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೆರಿಕದ ವಿಮಾನಯಾನ ಕಂಪನಿಗಳು ಪ್ರಯಾಣಿಕರಿಗೆ ತಮ್ಮ ಜೊತೆ ಸಾಕುಪ್ರಾಣಿಗಳನ್ನು, ಸಾಕು ಪಕ್ಷಿಗಳನ್ನು ಕರೆದೊಯ್ಯಲು ಅವಕಾಶ ಕೊಡುತ್ತವೆ. ಆತಂಕ, ಖಿನ್ನತೆಯಂತಹ ಸಮಸ್ಯೆಗಳಿಗೆ ತುತ್ತಾದವರಿಗೆ, ಭಾವನಾತ್ಮಕ ಆಸರೆ ನೀಡುವ ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲು ಅಲ್ಲಿ ಅವಕಾಶ ಇದೆ. ಆದರೆ ಹಾಗೆ ಕರೆದುಕೊಂಡು ಹೋಗುವ ಮುನ್ನ ವೈದ್ಯರು ಆ ಪ್ರಾಣಿ ಅಥವಾ ಪಕ್ಷಿಯನ್ನು ಪರೀಕ್ಷಿಸಿ ಪ್ರಮಾಣಪತ್ರ ನೀಡಬೇಕು. ಆದರೆ, ಅಮೆರಿಕದಲ್ಲಿ ಕೆಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಪ್ರಕರಣದಲ್ಲಿ ಮಹಿಳೆಯೊಬ್ಬಳು, ಒಂದು ನವಿಲನ್ನು ವಿಮಾನದಲ್ಲಿ ಕರೆದೊಯ್ಯಲು ಅವಕಾಶ ಕೇಳಿದ್ದಳಂತೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.