ಸೌರಾಷ್ಟ್ರ ಮತ್ತು ಕಛ್ ಕರಾವಳಿ ಪ್ರದೇಶದ ನಾಗರಿಕರಿಗೆ ಹವಾಮಾನ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡಿದೆ.
‘ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿರುವ ಬಿಪೊರ್‌ಜಾಯ್ ಪ್ರಬಲಗೊಂಡಿದೆ. ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ ಆರು ಗಂಟೆಗಳಲ್ಲಿ ಒಂಬತ್ತು ಕಿಲೊ ಮೀಟರ್ ವೇಗದಲ್ಲಿ ಉತ್ತರ-ಈಶಾನ್ಯದತ್ತ ಚಲಿಸಿದೆ’ ಎಂದು ಐಎಂಡಿ ತಿಳಿಸಿದೆ.
ಚಂಡಮಾರುತವು ಜೂನ್ 14ರ ವರೆಗೆ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ನಂತರ ಈಶಾನ್ಯ ಭಾಗಗಳತ್ತ ಚಲಿಸುತ್ತದೆ. ಜೂನ್ 15 ರ ಮಧ್ಯಾಹ್ನದ ಸುಮಾರಿಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ಮೂಲಕ ಸೌರಾಷ್ಟ್ರ, ಕಛ್ ಮತ್ತು ಪಾಕಿಸ್ತಾನದ ಕರಾವಳಿಯನ್ನು ದಾಟಲಿದೆ. ಚಂಡಮಾರುತದಿಂದಾಗಿ ಗಂಟೆಗೆ 125-135 ವೇಗದಲ್ಲಿ ಗಾಳಿ ಬೀಸುತ್ತಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ನಿರ್ದಿಷ್ಟವಾಗಿ ಯಾವ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯುತ್ತದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.
ಜೂನ್ 6 ರಂದು ಬಿಪರ್‌ಜೋಯ್ ಚಂಡಮಾರುತವು ರೂಪುಗೊಂಡಿತು. ಅಂದಿನಿಂದ ಇಂದಿನ ವರೆಗೆ ಅದರ ಪಥ ಮತ್ತು ತೀವ್ರತೆ ಅನಿಶ್ಚಿತತೆಯಿಂದಲೇ ಕೂಡಿದೆ.