ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಾಗಲಿದೆ ಅಂಫಾನ್ ಚಂಡಮಾರುತದ ತೀವ್ರತೆ: ಹವಾಮಾನ ಇಲಾಖೆ ಎಚ್ಚರಿಕೆ

Last Updated 17 ಮೇ 2020, 3:56 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಹಲವೆಡೆ ಅಂಫಾನ್ ಚಂಡಮಾರುತಪ್ರಭಾವ ಬೀರಲಿದ್ದು, ದಕ್ಷಿಣ ರಾಜ್ಯಗಳಲ್ಲಿ ಈ ಪ್ರಭಾವ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ಎಚ್ಚರಿಕೆ ನೀಡಿದೆ.

ಮುಂದಿನ 12 ಗಂಟೆಗಳ ಅವಧಿಯಲ್ಲಿಆಗ್ನೇಯ ಬಂಗಾಳಕೊಲ್ಲಿ ಹಾಗೂ ನೆರೆಹೊರೆಯ ರಾಜ್ಯಗಳಲ್ಲಿ ತನ್ನ ಪ್ರಭಾವವನ್ನು ತೀವ್ರಗೊಳಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.ನಾಳೆ ಬೆಳಿಗ್ಗೆವರೆಗೆ ಇದರತೀವ್ರತೆ ಹೆಚ್ಚಾಗಲಿದೆ ಎಂದುಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಗಳು ಮುನ್ನೆಚ್ಚರಿಕೆ ವಹಿಸಿವೆ. ಚಂಡಮಾರುತದಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಂಡಿವೆ. ಈಗಾಗಲೆ ಒಡಿಶಾದಲ್ಲಿ ಚಂಡಮಾರುತ ಅಂಫಾನ್‌‌ ಪ್ರಭಾವ ಬೀರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರವೇ 12 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಿಸಲಾಗಿದೆ.

ಒಡಿಶಾ ಉತ್ತರ ಭಾಗದ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಚಂಡಮಾರುತದಿಂದ ಹಾನಿ ಉಂಟಾದರೆ, ಆಶ್ರಯಕ್ಕಾಗಿ ಕಟ್ಟಡಗಳನ್ನು ಗುರುತಿಸುವಂತೆ ತಿಳಿಸಲಾಗಿದೆ. ಬಹುತೇಕ ಆಶ್ರಯ ಕಟ್ಟಡಗಳನ್ನು ಕೋವಿಡ್‌–19 ಕ್ವಾರಂಟೈನ್‌ ಕೇಂದ್ರಗಳಾಗಿ ಬಳಕೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT