ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸೇರಿ 11 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’: ಭಾರಿ ಮಳೆ ಸಾಧ್ಯತೆ

Last Updated 18 ನವೆಂಬರ್ 2021, 9:54 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆ 8.30ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದರ ಜೊತೆಗೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೂ ಆರೆಂಜ್‌ ಅಲರ್ಟ್ ನೀಡಲಾಗಿದೆ.

‘ಆರೆಂಜ್‌ ಅಲರ್ಟ್‌’ ನೀಡಿರುವ ಪ್ರದೇಶಗಳಲ್ಲಿ ಧಾರಾಕಾರ (Very Heavy Rain) ಆಗುವ ಸಾಧ್ಯತೆಗಳಿವೆ. ‘ಯಲ್ಲೋ ಅಲರ್ಟ್‌’ ನೀಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆ (Heavy Rain) ಆಗುವ ಮುನ್ಸೂಚನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT