ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಕರಾವಳಿಯಲ್ಲಿ ಹೊಸದಾಗಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿ: ಏನಿದರ ಪರಿಣಾಮ?

Last Updated 16 ನವೆಂಬರ್ 2021, 10:06 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಕರಾವಳಿಯ, ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿ ಮಂಗಳವಾರ ಮುಂಜಾನೆ ಕಡಿಮೆ ಒತ್ತಡ ಸೃಷ್ಟಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹವಾಮಾನ ಇಲಾಖೆ, ‘ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಹೊಸದಾಗಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಇಂದು ಬೆಳಗ್ಗೆ 5:30ರ ಅವಲೋಕನೆಗಳ ಆಧಾರದಲ್ಲಿ ಇದು ಸ್ಪಷ್ಟವಾಗಿದೆ. ಇಂದು ಬೆಳಗ್ಗೆ 8: 30ರ ವರೆಗೆ ಅದು ಅಲ್ಲಿಯೇ ಸ್ಥಿರವಾಗಿತ್ತು. ಕಡಿಮೆ ಒತ್ತಡ ಪ್ರದೇಶವು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ಅದು ಸ್ಪಷ್ಟವಾಗಿ ಗುರುತಿಸಲ್ಪಡುತ್ತದೆ,’ ಎಂದು ಹೇಳಿದೆ.

16 ರಂದು ಉತ್ತರ ಕೇರಳ, ಕರ್ನಾಟಕ-ಗೋವಾ ಕರಾವಳಿಯ ಪೂರ್ವ–ಕೇಂದ್ರ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ಬಲವಾದ ಗಾಳಿ ಬೀಸಲಿದೆ.

17, 18 ರಂದು ಮಹಾರಾಷ್ಟ್ರ ಕರಾವಳಿಯ ಪೂರ್ವ–ಮಧ್ಯ ಅರಬ್ಬಿ ಸಮುದ್ರದ ಮೇಲೆ, 19ರಂದು ಉತ್ತರ ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಇರಲಿದ್ದು, ಈ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.

ಇನ್ನುಳಿದಂತೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡ ಪ್ರದೇಶದ ಕಾರಣದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನ. 20ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT