ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಬ್ಬಕಗಳ ಸಂರಕ್ಷಣೆಗೆ ₹33.85 ಕೋಟಿ ಯೋಜನೆ’

Last Updated 12 ಜುಲೈ 2019, 18:26 IST
ಅಕ್ಷರ ಗಾತ್ರ

ನವದೆಹಲಿ: ಅಳಿವಿನಂಚಿ ನಲ್ಲಿರುವ ಹೆಬ್ಬಕಗಳ (ಗ್ರೇಟ್‌ ಇಂಡಿಯನ್‌ ಬಸ್ಟರ್ಡ್‌) ಸಂರಕ್ಷಣೆ ಗಾಗಿ ₹33.85 ಕೋಟಿಯ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ ಎಂದು ಕೇಂದ್ರ ಪರಿಸರ ಖಾತೆಯ ರಾಜ್ಯ ಸಚಿವ ಬಾಬುಲ್‌ ಸುಪ್ರಿಯೊ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ದೈತ್ಯ ಪಕ್ಷಿಗಳ ಸಾಲಿಗೆ ಸೇರುವ ಈ ಹಕ್ಕಿಗಳ ಸಂಖ್ಯೆ ದೇಶದಲ್ಲಿ ಈಗ ಕೇವಲ 130 ಇದೆ ಎಂದೂ ತಿಳಿಸಿದ್ದಾರೆ.

ಹೆಬ್ಬಕ ಸೇರಿದಂತೆ ಅಳಿವಿನಂಚಿನಲ್ಲಿರುವ 21 ಪ್ರಭೇದದ ಪಕ್ಷಿಗಳ ಸಂರಕ್ಷಣೆಗಾಗಿ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪರಿಸರ ಸಚಿವಾಲಯವು ಅನುದಾನ ಒದಗಿಸುತ್ತಿದೆ. ಈ ಯೋಜನೆಯ ಮೂಲಕ ಹೆಬ್ಬಕಗಳ ಆವಾಸಸ್ಥಾನ ಅಭಿವೃದ್ಧಿ ಹಾಗೂ ಸಂತಾನೋತ್ಪತ್ತಿ ಸಂರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT