ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮೃತಿ ಶತಕ; ಜೂಲನ್ ‘ದ್ವಿಶತಕ’

Last Updated 7 ಫೆಬ್ರುವರಿ 2018, 19:32 IST
ಅಕ್ಷರ ಗಾತ್ರ

ಕಿಂಬರ್ಲಿ : ಎಡಗೈ ಬ್ಯಾಟ್ಸ್‌ವುಮನ್ ಸ್ಮೃತಿ ಮಂದಾನ (135; 173 ನಿಮಿಷ, 129ಎಸೆತ, 14 ಬೌಂಡರಿ, 1ಸಿಕ್ಸರ್) ಗಳಿಸಿದ ಶತಕದ ಬಲದಿಂದ ಭಾರತ ಮಹಿಳೆಯರ ತಂಡವು ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 178 ರನ್‌ಗಳಿಂದ ಜಯಿಸಿತು.

ಭಾರತ ತಂಡವು 50 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 302 ರನ್ ಗಳಿಸಿತು. ನಂತರ ಆತಿಥೇಯ ತಂಡವು 30.5 ಓವರ್‌ಗಳಲ್ಲಿ 124 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು 2–0ಯಿಂದ ಕೈವಶ ಮಾಡಿಕೊಂಡಿತು.

ಜೂಲನ್‌ಗೆ 200ನೇ ವಿಕೆಟ್:

ಮಧ್ಯಮವೇಗಿ ಜೂಲನ್ ಗೋಸ್ವಾಮಿ ಅವರು ಏಕದಿನ ಕ್ರಿಕೆಟ್‌ನಲ್ಲಿ 200ನೇ ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಪಂದ್ಯದಲ್ಲಿ ಲಾರಾ ವೊಲ್ವಾರ್ಡ್ ವಿಕೆಟ್ ಪಡೆದ ಅವರು ಈ ಮೈಲುಗಲ್ಲು ಮುಟ್ಟಿದರು. ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಕೂಡ ಅವರಾಗಿದ್ದಾರೆ.  ಅವರು ಒಟ್ಟು 166 ಪಂದ್ಯಗಳನ್ನು ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT