ಜಗಳೂರು: ‘ಮನುಷ್ಯನ ಅತಿಯಾದ ಸ್ವಾರ್ಥತೆ ಹಾಗೂ ಸ್ವೇಚ್ಛಾಚಾರ ಪ್ರವೃತ್ತಿಯು ವ್ಯಾಪಕವಾಗಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತದೆ’ ಎಂದು ಶಾಸಕ ಬಿ.ದೇವೇಂದ್ರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಶ್ವದಲ್ಲಿಯೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ, ಭೂಮಾಲಿನ್ಯಗೊಂಡು ಮನುಷ್ಯ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾನೆ. ಹಣ, ಆಸ್ತಿಗಿಂತ ಆರೋಗ್ಯ ಮುಖ್ಯವಾಗಿದ್ದು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಕಿವಿಮಾತು ಹೇಳಿದರು.

‘ಜಿಲ್ಲೆಯಾದ್ಯಂತ ಸಂಗ್ರಹವಾದ ಕೆರೆ ನೀರನ್ನು ಲ್ಯಾಬೋರೇಟರಿಗಳಲ್ಲಿ ಪರೀಕ್ಷೆ ಮಾಡುವುದಲ್ಲದೆ, ಶುದ್ಧ ನೀರು ಸಂಸ್ಕರಣಾ ಘಟಕ ಅಳವಡಿಕೆ ಮಾಡಲಾಗುತ್ತಿದೆ. ಪರಿಸರದಲ್ಲಿನ ಗಾಳಿಯ ಗುಣಮಟ್ಟ ಪರೀಕ್ಷೆ ಮಾಡಲಾಗುತ್ತಿದೆ. ಪರಿಸರ ಸ್ವಚ್ಛತೆ ಕಾಪಾಡಲು ಮನೆಗಳಲ್ಲಿ ಹಸಿಕಸ, ಒಣಕಸ ವಿಂಗಡನೆ ಮಾಡುವ ಮೂಲಕ ಪೌರಕಾರ್ಮಿಕರಿಗೆ ಸಹಕರಿಸಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಕೈಜೋಡಿಸಬೇಕು’ ಎಂದು ಜಿಲ್ಲಾ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಮನವಿ ಮಾಡಿದರು.

ಇದೇ ವೇಳೆ ಪರಿಸರ ಜಾಗೃತಿ ಅಂಗವಾಗಿ ವಿವಿಧ ಶಾಲಾ ಹಂತದಲ್ಲಿ ಪ್ರಬಂಧ, ಚರ್ಚಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಶಾಲಾ ಕೈತೋಟ ನಿರ್ಮಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ, ಶಾಲಾ ಶಿಕ್ಷಕರಿಗೆ ಪ್ರಶಸ್ತಿ, ನಗದು ಬಹುಮಾನ ನೀಡಿ ಗೌರವಿಸಲಾಯಿತು.

ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ಮಾಲಿನ್ಯ ನಿಯಂತ್ರಣ ಮಂಡಳಿ ಉಪವೈಜ್ಞಾನಿಕ ಅಧಿಕಾರಿ ಎಲ್. ಮಂಜುನಾಥ್, ಸಣ್ಣಗೌಡ್ರು ಫಾರ್ಮ್ ಸೈನ್ಸ್ ಸೆಂಟರ್ ಮಾಲೀಕ ಎಚ್.ಎಂ ಸಣ್ಣಗೌಡ, ಕೆಜಿವಿಬಿ ನಿಕಟಪೂರ್ವ ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಸಿಡಿಪಿಒ ಬೀರೇಂದ್ರಕುಮಾರ್, ಪರಿಸರ ಇಲಾಖೆಯ ಮಂಜುನಾಥ್, ಬಸವರಾಜ್, ಎಚ್.ಎಂ.ಸಂಗಪ್ಪ, ಶಿಲ್ಪಾ, ಶಿಕ್ಷಕಿ ಜ್ಯೋತಿ, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಕಲ್ಲೇಶ್, ರಾಜು, ಮರೇನಹಳ್ಳಿ ಶೇಖರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-43-2056400006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.