ರಾಣೆಬೆನ್ನೂರು: ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣ ಆಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕು ಎಂದು ಆರ್ಟಿಇಎಸ್ ಮಹಾವಿದ್ಯಾಲಯದ ಕಾಲೇಜಿನ ಪ್ರೊ.ಸಿ.ಎನ್. ಪೂಜಾರ ಹೇಳಿದರು.

ಇಲ್ಲಿನ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಿಶ್ವ ಭೂಮಿದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣ ಆಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಯುವಕರು ಭೂಮಿಯ ಶುದ್ದತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಾಯಿಲತಾ ಮಡಿವಾಳರ, ಪ್ರೊ. ನಾಗರಾಜ ಗವಿಯಪ್ಪನವರ, ಪ್ರೊ. ಚನಬಸಪ್ಪ ಮಾಳಿ ಪ್ರೊ. ಎಂ. ಎನ್. ಸೂರಣಗಿ, ಪ್ರೊ. ಗಣೇಶ ಅಂಗಡಿ, ನಿಶಾ ಕೆ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-22-1704124787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.