ದೇಶದ ಉನ್ನತ ಶಿಕ್ಷಣದ ಮೇಲುಸ್ತುವಾರಿ ಮತ್ತು ನಿಯಂತ್ರಣಕ್ಕಾಗಿ ‘ವಿಕಸಿತ ಭಾರತ ಶಿಕ್ಷಣ ಅಧಿಷ್ಠಾನ’ ಎಂಬ ಹೆಸರಿನಲ್ಲಿ ಒಂದೇ ಆಯೋಗವನ್ನು ಸ್ಥಾಪಿಸುವ ಪ್ರಸ್ತಾವವನ್ನು ಶಿಕ್ಷಣ ಸಚಿವಾಲಯವು ಮಸೂದೆಯಲ್ಲಿ ಮಾಡಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ಸರ್ಕಾರ ಹೇಳಿದ್ದು, ಇದು ಕಾಯ್ದೆಯಾಗಿ ಜಾರಿಗೆ ಬಂದರೆ ಈಗಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ), ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯು (ಎನ್‌ಸಿಟಿಇ) ಹೊಸ ಆಯೋಗದೊಂದಿಗೆ ವಿಲೀನಗೊಳ್ಳಲಿವೆ.