ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷದ ಜೂನ್‌ನಲ್ಲಿ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಮೃತಪಟ್ಟಿದ್ದರು. ಬುಧವಾರದ ಅಪಘಾತವು ಆ ದುರ್ಘಟನೆಯನ್ನು ಮತ್ತೆ ನೆನಪಿಸಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ವಿಮಾನ ಅಥವಾ ಹೆಲಿಕಾಪ್ಟರ್ ಅಪಘಾತದಲ್ಲಿ ಹಲವರು ರಾಜಕೀಯ ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಪ್ರಮುಖರ ವಿವರಗಳನ್ನು ಇಲ್ಲಿ ನೀಡಲಾಗಿದೆ