ಬುಧವಾರ, 11 ಮಾರ್ಚ್ 2026
×
ADVERTISEMENT

ಆಳ–ಅಗಲ| ದೇವದಾಸಿಯರ ಸಂಖ್ಯೆ ಇಳಿದಿದೆ, ಆದರೆ...

ಮರು ಸಮೀಕ್ಷೆಯಲ್ಲಿ ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ನೋಟ, ಇನ್ನೂಸುಧಾರಿಸದ ಬದುಕು
Published : 15 ಫೆಬ್ರುವರಿ 2026, 22:30 IST
Last Updated : 15 ಫೆಬ್ರುವರಿ 2026, 22:30 IST
ADVERTISEMENT
ಫಾಲೋ ಮಾಡಿ
Comments
ರಾಜ್ಯದ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರು ಮತ್ತು ಮಕ್ಕಳ ಆರ್ಥಿಕ ಸಾಮಾಜಿಕ ಸ್ಥಿತಿಗತಿಗಳನ್ನು ಅರಿಯುವ ಉದ್ದೇಶದಿಂದ ಮಹಿಳಾ ಅಭಿವೃದ್ಧಿ ನಿಗಮವು ಕಳೆದ ವರ್ಷ ನಡೆಸಿದ್ದ ಮರು ಸಮೀಕ್ಷೆಯ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಸಲ್ಲಿಸಿದ್ದಾರೆ. 2007–08ರಲ್ಲಿ ನಡೆದ ಸಮೀಕ್ಷೆಗೆ ಹೋಲಿಸಿದರೆ, ಈಗ ನಡೆಸಿದ ಸಮೀಕ್ಷೆಯು ರಾಜ್ಯದಲ್ಲಿ ಮಾಜಿ ದೇವದಾಸಿಯರ ಸಂಖ್ಯೆ ಶೇ 50ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಆದರೆ, ಅವರ ಆರ್ಥಿಕ, ಸಾಮಾಜಿಕ ಸ್ಥಿತಿಗಳಲ್ಲಿ ಸುಧಾರಣೆಯಾಗಿಲ್ಲ ಎಂದೂ ಹೇಳಿದೆ. ಈ ಸಮೀಕ್ಷೆಯನ್ನು ಸರಿಯಾಗಿ ನಡೆಸಲಾಗಿಲ್ಲ. ಸಂಖ್ಯೆ ಕಡಿಮೆಯಾಗಿರುವುದರಿಂದ ಹಲವು ಮಾಜಿ ದೇವದಾಸಿಯರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದು ಅವರ ಪರವಾಗಿ ಕೆಲಸ ಮಾಡುತ್ತಿರುವ ಕೆಲವು ಸಂಘಟನೆಗಳು ದೂರಿವೆ
.
.
.
.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT