2025-26ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ್ದು, ಹಲವು ಕ್ಷೇತ್ರಗಳ ಬೆಳವಣಿಗೆ ಮತ್ತು ಕೊರತೆಗಳ ಬಗ್ಗೆ ಉಲ್ಲೇಖಿಸಿದೆ. ಕೃಷಿ, ಆರೋಗ್ಯ, ಶಿಕ್ಷಣ ಮುಂತಾದ ಕ್ಷೇತ್ರಗಳ ಬೆಳವಣಿಗೆಯನ್ನು ಗಮನಿಸುತ್ತಲೇ ಆಗಬೇಕಾದ ಕೆಲಸಗಳ ಬಗ್ಗೆಯೂ ಪ್ರಸ್ತಾಪಿಸಿದೆ. ಡಿಜಿಟಲ್ ವ್ಯಸನ ಹೆಚ್ಚುತ್ತಿರುವ ಬಗ್ಗೆ ಸಮೀಕ್ಷೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಈ ದಿಸೆಯಲ್ಲಿ ನಿರ್ದಿಷ್ಟ ಪರಿಹಾರ ಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.