ಹರೀಶ್ ರಾಣಾ ಎನ್ನುವ 31 ವರ್ಷದ ಯುವಕನಿಗೆ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಪರೋಕ್ಷ ದಯಾಮರಣವನ್ನು ಕಾನೂನುಬದ್ಧಗೊಳಿಸಿದ ನಂತರ ನ್ಯಾಯಾಲಯವು ಅನುಮತಿ ನೀಡಿದ ಮೊದಲ ಪ್ರಕರಣ ಇದಾಗಿದೆ. ವೈದ್ಯಕೀಯ ಚಿಕಿತ್ಸೆ ದುಬಾರಿಯಾಗಿರುವ, ಬಡವರ ಸಂಖ್ಯೆ ಹೆಚ್ಚಿರುವ ಭಾರತದಲ್ಲಿ ದಯಾಮರಣಕ್ಕೆ ಅವಕಾಶ ನೀಡುವುದು ಯಾವ ರೀತಿಯ ಪರಿಣಾಮಗಳಿಗೆ ಎಡೆಮಾಡಿಕೊಡಬಹುದು ಎನ್ನುವ ಬಗ್ಗೆ ಭಿನ್ನ ಅಭಿಪ್ರಾಯಗಳಿವೆ