ದೇಶದಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಹೋರಾಟಕ್ಕೆ ಹೊಸ ದಿಕ್ಕು ನೀಡಿದ್ದೇ ಅವಿಭಜಿತ ಆಂಧ್ರ ಪ್ರದೇಶದ ಮಾದಿಗ ಸಮುದಾಯ. ಮೂರು ದಶಕಗಳ ಅವರ ಹೋರಾಟಕ್ಕೆ ಇದೀಗ ಫಲ ಸಿಕ್ಕಿದೆ. ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಹೆಚ್ಚು ಕಡಿಮೆ ಒಂದೇ ಸಮಯದಲ್ಲಿ ಎಸ್‌ಸಿ ಒಳಮೀಸಲಾತಿ ನೀಡುವ ದಿಸೆಯಲ್ಲಿ ನಿರ್ಣಾಯಕ ಹೆಜ್ಜೆ ಇಟ್ಟಿವೆ. ಇದೇ ವೇಳೆ, ಕಾನೂನು ತೊಡಕು, ನಿಖರ ದತ್ತಾಂಶದ ವಿಚಾರಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಒಳಮೀಸಲಾತಿ ಪ್ರಕ್ರಿಯೆ ತಾರ್ಕಿಕ ಅಂತ್ಯ ಕಾಣುವುದೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.