ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಅಂಕೋಲಾ ತಾಲ್ಲೂಕಿನಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಬಂದರುಗಳ ನಿರ್ಮಾಣಕ್ಕೆ ಸ್ಥಳೀಯ ಮೀನುಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ನಡೆಸಿದ್ದ ತೀವ್ರ ಪ್ರತಿಭಟನೆ ರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿತ್ತು. ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸರು ಮಾಡಿದ್ದ ಬಲಪ್ರಯೋಗ ಕೂಡ ಚರ್ಚೆಗೆ ಗ್ರಾಸವಾಗಿತ್ತು. ಬಂದರುಗಳು ನಿರ್ಮಾಣವಾದರೆ ತಾವು ಶಾಶ್ವತವಾಗಿ ನೆಲೆ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕ ಮೀನುಗಾರರದ್ದು
ಕೇಣಿಯಲ್ಲಿ ನಿರ್ಮಾಣಗೊಳ್ಳಲಿರುವ ಸರ್ವಋತು ಆಳ ಸಮುದ್ರದ ಬಂದರು ಯೋಜನೆ ವಿರೋಧಿಸಿ ಸ್ಥಳೀಯ ಮೀನುಗಾರರು ಸಮುದ್ರದಲ್ಲಿ ದೋಣಿಗಳನ್ನು ನಿಲುಗಡೆ ಮಾಡಿ ಪ್ರತಿಭಟಿಸಿದ್ದರು
ಟೊಂಕದ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸ್ವಾಧೀನಗೊಳ್ಳುವ ಜಾಗದ ಗಡಿ ಗುರುತಿಸಿರುವುದು