ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ತಮ್ಮ ಭಾರತ ವಿರೋಧಿ ಮನೋಭಾವವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಭಾರತದ ಏಳು ಈಶಾನ್ಯ ರಾಜ್ಯಗಳಿಗೆ ಸಮುದ್ರ ಮಾರ್ಗದ ನೇರ ಸಂಪರ್ಕ ಇಲ್ಲದಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಬಾಂಗ್ಲಾದ ಕರಾವಳಿಯನ್ನು ಬಳಸಿಕೊಂಡು ತನ್ನ ಆರ್ಥಿಕ ಚಟುವಟಿಕೆ ವಿಸ್ತರಿಸಿಕೊಳ್ಳುವಂತೆ ಚೀನಾಕ್ಕೆ ಆಹ್ವಾನ ನೀಡಿದ್ದಾರೆ. ಯೂನುಸ್ ಅವರ ಹೇಳಿಕೆಯಿಂದ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ.