ಒಂದು ಸಾಲಿನಲ್ಲಿ
ಇರಾನ್-ಅಮೆರಿಕ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಶುಲ್ಕ ವಿಧಿಸುವ ಇರಾನ್‌ನ ಇರಾದೆ ಮತ್ತು ಅಂತರರಾಷ್ಟ್ರೀಯ ಕಾನೂನಿನ ಸವಾಲುಗಳ ವಿಶ್ಲೇಷಣೆ.

ಅಮೆರಿಕ ಮತ್ತು ಇಸ್ರೇಲ್ ಜೊತೆಯಾಗಿ ಇರಾನ್ ವಿರುದ್ಧ ಸಮರ ಆರಂಭಿಸಿದ ನಂತರದಲ್ಲಿ ಕಚ್ಚಾ ತೈಲದ ಬೆಲೆಯು ಸರಿಸುಮಾರು ಶೇ 50ರಷ್ಟು ಜಾಸ್ತಿಯಾಗಿದೆ. ಹೊರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡಚಣೆ ಉಂಟಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಪ್ರಸ್ತಾವನೆಯ ಭಾಗವಾಗಿ ಹೊರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗೆ ಶುಲ್ಕ ವಿಧಿಸಲು ಬಯಸುತ್ತಿದೆ ಎಂದು ವರದಿಯಾಗಿದೆ. ಇರಾನ್ ಮತ್ತು ಒಮಾನ್ ನಡುವೆ ಕೇವಲ 34 ಕಿ.ಮೀ ಅಗಲವಿರುವ ಈ ಜಲಸಂಧಿಯು ಕೊಲ್ಲಿ ರಾಷ್ಟ್ರಗಳಿಂದ ಹಿಂದೂ ಮಹಾಸಾಗರಕ್ಕೆ ಹೋಗುವ ಪ್ರಮುಖ ಮಾರ್ಗವಾಗಿದೆ. ವಿಶ್ವದ ತೈಲ ಪೂರೈಕೆಯ ಸುಮಾರು ಐದನೇ ಒಂದು ಭಾಗ, ರಸಗೊಬ್ಬರ ಸೇರಿದಂತೆ ಇತರ ಪ್ರಮುಖ ಸರಕುಗಳು ಇದೇ ಮಾರ್ಗವಾಗಿ ಸಾಗುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.