ಮತ್ತೊಬ್ಬ ನ್ಯಾಯಮೂರ್ತಿ ವಿರುದ್ಧ ನೋಟಿಸ್
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರಕ್ರಿಯೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಕೋಮು ಪ್ರಚೋದಿತ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿ ಶೇಖರ್ ಯಾದವ್ ಅವರ ಪದಚ್ಯುತಿಗೆ ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ರಾಜ್ಯಸಭೆಯಲ್ಲಿ ಗೊತ್ತುವಳಿ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಸಭಾಪತಿಯವರು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಾಗಿದೆ.