ಕರ್ನಾಟಕದಲ್ಲಿ ಮೊದಲಿಗೆ ಜಾತಿ ಸಮೀಕ್ಷೆ ಆದ ನಂತರ ನೆರೆಯ ತೆಲಂಗಾಣ ಮತ್ತು ಬಿಹಾರ ರಾಜ್ಯಗಳಲ್ಲೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆದಿದೆ. ಎರಡೂ ರಾಜ್ಯಗಳಲ್ಲಿ ಸರ್ಕಾರದ ಪ್ರಯತ್ನಕ್ಕೆ ವಿರೋಧ ವ್ಯಕ್ತವಾಗಿತ್ತು. ಸಮೀಕ್ಷೆಯ ವರದಿಯ ಆಧಾರದಲ್ಲಿ ಎರಡೂ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ. ತೆಲಂಗಾಣದ ನಿರ್ಧಾರವು ರಾಷ್ಟ್ರಪತಿ ಅಂಗಳದಲ್ಲಿದೆ. ಬಿಹಾರದಲ್ಲಿ ಮೀಸಲಾತಿ ಹೆಚ್ಚಳ ಆದೇಶವನ್ನು ಪಟ್ನಾ ಹೈಕೋರ್ಟ್ ರದ್ದು ಮಾಡಿದೆ. ಪ್ರಕರಣ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ.
ಆಧಾರ: ಪಿಟಿಐ, ಸುಪ್ರೀಂಕೋರ್ಟ್ ಅಬ್ಸರ್ವರ್, ಮಾಧ್ಯಮ ವರದಿಗಳು