ಕರ್ನಾಟಕವೂ ಸೇರಿದಂತೆ ಭಾರತದ ಬಹುತೇಕ ರಾಜ್ಯಗಳಲ್ಲಿ ತಾಪಮಾನ ಏರಿಕೆಯು ಜನರನ್ನು ಹೈರಾಣಾಗಿಸಿದೆ. ಇದಕ್ಕೆ ತಕ್ಕಂತೆ ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಾ ಸಾಗುತ್ತಿದೆ. ಕೇಂದ್ರ ಜಲ ಆಯೋಗದ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಜಲಾಶಯಗಳ ನೀರಿನ ಮಟ್ಟವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿದ್ದರೂ, ಕಳೆದ ವರ್ಷಕ್ಕಿಂತ ಕಡಿಮೆ ಇದೆ. ತಮಿಳುನಾಡಿನ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ ಕಂಡಿದ್ದು, ಇದು ಕಾವೇರಿ ಕೊಳ್ಳದ ಮೇಲೆ ಹೆಚ್ಚು ಒತ್ತಡ ಹೇರಲಿದೆ