ಸಾಮಾನ್ಯವಾಗಿ ಚಳಿಗಾಲ ಅಂತ್ಯವಾಗಿ, ಬಿಸಿಲು ಹೆಚ್ಚಾಗುವುದರೊಂದಿಗೆ ಮಲೆನಾಡಿನಲ್ಲಿ ಮಂಗನ ಕಾಯಿಲೆ ವ್ಯಾಪಕವಾಗುತ್ತದೆ. ಆದರೆ, ಈ ಬಾರಿ ಚಳಿಗಾಲದಲ್ಲೇ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಯಿಲೆ ಹಲವರನ್ನು ಬಾಧಿಸುತ್ತಿದೆ. ರಾಜ್ಯದಲ್ಲಿ ಕೆಎಫ್‌ಡಿ ಪತ್ತೆಯಾಗಿ 68 ವರ್ಷ ಕಳೆದರೂ ಅದಕ್ಕೆ ಸರಿಯಾದ ಚಿಕಿತ್ಸೆ ಇಲ್ಲ. ಪ್ರಸ್ತುತ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಾತ್ರವೇ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಇಲ್ಲಿಯವರೆಗೂ ಈ ಕಾಯಿಲೆ ತಡೆಗೆ ಬಳಕೆಯಲ್ಲಿದ್ದ ಲಸಿಕೆಯು ಇತ್ತೀಚಿನ ವರ್ಷಗಳಲ್ಲಿ ಕೆಲಸ ಮಾಡುತ್ತಿಲ್ಲ. ಹೊಸ ಲಸಿಕೆಯ ಪ್ರಯೋಗಗಳು ಇನ್ನೂ ನಡೆಯುತ್ತಿದ್ದು, ಮಲೆನಾಡಿಗರು ಆತಂಕಗೊಂಡಿದ್ದಾರೆ
ಮಂಗನ ಕಾಯಿಲೆ ತಡೆಗೆ ಲಸಿಕೆ ಹಾಕುತ್ತಿರುವುದು
ಕೆಎಫ್‌ಡಿ ನಿಯಂತ್ರಣಕ್ಕೆ ಮಲೆನಾಡಿನಲ್ಲಿ ಅಕ್ಟೋಬರ್ ತಿಂಗಳಿಂದಲೇ ಜಾಗೃತಿ ಕಾರ್ಯಕ್ರಮ ನಡೆಸಿದ್ದೇವೆ. ಮನೆ ಮನೆಗೆ ತೆರಳಿ ಕಾಯಿಲೆ ಬಗ್ಗೆ ತಿಳಿವಳಿಕೆ ನೀಡುತ್ತಿದ್ದೇವೆ. ಪ್ರತಿ ಮನೆಗೆ ಎರಡು ಬಾಟಲಿ ಡೆಪಾ ಎಣ್ಣೆ ವಿತರಣೆ ಮಾಡಲಾಗುತ್ತಿದೆ
ಡಾ.ಎಲ್.ನಾಗರಾಜ ನಾಯ್ಕ ಸರ್ವೇಕ್ಷಣಾ ಅಧಿಕಾರಿ, ಆರೋಗ್ಯ ಇಲಾಖೆ ಶಿವಮೊಗ್ಗ