ಜಗತ್ತಿನಲ್ಲೇ ಅತಿ ಹೆಚ್ಚು (3,682) ಹುಲಿಗಳನ್ನು ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿರುವ ಭಾರತದಲ್ಲಿ ಅವುಗಳ ಸಾವಿನ ಪ್ರಮಾಣವೂ ಗಣನೀಯವಾಗಿದೆ. ದೇಶದಲ್ಲೇ ಹೆಚ್ಚು ವ್ಯಾಘ್ರಗಳಿರುವ ಎರಡನೇ ರಾಜ್ಯ ಎಂಬ ಕೀರ್ತಿಗೆ ಭಾಜನರಾಗಿರುವ ಕರ್ನಾಟಕದಲ್ಲಿ ಹುಲಿಗಳ ಸಾವಿನ ಸಂಖ್ಯೆಯೂ ಹೆಚ್ಚು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ಅಂಕಿ ಅಂಶಗಳ ಪ್ರಕಾರ, ರಾಜ್ಯ ಮೂರನೇ ಸ್ಥಾನದಲ್ಲಿದೆ. ನಾಗರಹೊಳೆಯು ದೇಶದ ಹುಲಿ ಸಂರಕ್ಷಿತ ಪ್ರದೇಶಗಳ ಪೈಕಿ ಹುಲಿ ಸಾವಿನ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿಯೇ ಹೆಚ್ಚು ಹುಲಿಗಳನ್ನು ಹೊಂದಿರುವ ಮಧ್ಯಪ್ರದೇಶ, ವ್ಯಾಘ್ರಗಳ ಸಾವಿನಲ್ಲೂ ಮೊದಲನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ.