ಗುರುವಾರ, 3 ಜುಲೈ 2025
×
ADVERTISEMENT
ಆಳ–ಅಗಲ | ಒಂದನೇ ತರಗತಿ: ‘6 ವರ್ಷ’ದ ಸಂದಿಗ್ಧ
ಆಳ–ಅಗಲ | ಒಂದನೇ ತರಗತಿ: ‘6 ವರ್ಷ’ದ ಸಂದಿಗ್ಧ
ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ; ವಿನಾಯಿತಿ ನೀಡುವಂತೆ ಪೋಷಕರ ಅಳಲು
ಫಾಲೋ ಮಾಡಿ
Published 7 ಏಪ್ರಿಲ್ 2025, 23:30 IST
Last Updated 7 ಏಪ್ರಿಲ್ 2025, 23:30 IST
Comments
ಪ್ರಾಥಮಿಕ ಶಾಲೆಯ ಒಂದನೇ ತರಗತಿಗೆ ಮಕ್ಕಳನ್ನು ಸೇರಿಸುವ ಕನಿಷ್ಠ ವಯೋಮಿತಿಯ ವಿಚಾರವು ರಾಜ್ಯದಲ್ಲಿ ಪೋಷಕರ ಕಳವಳಕ್ಕೆ ಕಾರಣವಾಗಿದೆ. 2025–26ನೇ ಸಾಲಿಗೆ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 6 ವರ್ಷ ಪೂರೈಸಿರಬೇಕು ಎನ್ನುವ ರಾಜ್ಯ ಸರ್ಕಾರದ 2022ರ ಆದೇಶವನ್ನು ಶಾಲೆಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಾಲಿಸಲು ಮುಂದಾಗಿವೆ. ಇದರಿಂದ ರಾಜ್ಯದ ಲಕ್ಷಾಂತರ ಮಕ್ಕಳು ಯುಕೆಜಿ ಅನ್ನು ಮತ್ತೆ ಒಂದು ವರ್ಷ ಪುನರಾವರ್ತಿಸಬೇಕಾಗಿ ಬಂದಿದೆ. ಪೋಷಕರ ಆರ್ಥಿಕ ಹೊರೆ ಮತ್ತು ಮಕ್ಕಳ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಇತರೆ ಕೆಲ ರಾಜ್ಯಗಳಂತೆ, ಶಾಲಾ ಪ್ರವೇಶದ ವಯೋಮಿತಿಯಲ್ಲಿ ಈ ಬಾರಿ ವಿನಾಯಿತಿ ನೀಡುವಂತೆ ಪೋಷಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಪ್ರತಿ ವರ್ಷವೂ ಇಂಥದ್ದೇ ಸ್ಥಿತಿ ಉದ್ಭವಿಸುವುದರಿಂದ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ
ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಎನ್‌ಇಪಿ ಭಾಗವಾಗಿ ಶಾಲಾ ಪ್ರವೇಶದ ವಯೋಮಿತಿಯನ್ನು ಆರು ವರ್ಷಕ್ಕೆ ನಿಗದಿ ಮಾಡಿತ್ತು. ವಯೋಮಿತಿ ಸಡಿಲಿಸುವಂತೆ ಹಲವು ಪೋಷಕರು ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎನ್‌ಇಪಿ ರದ್ದು ಮಾಡಲು ಕ್ರಮ ಕೈಗೊಂಡಿದೆ. ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ರೂಪಿಸಲು ಆಯೋಗ ರಚಿಸಿದೆ. ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೂ ತರಲಾಗಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸಿನ ಆಧಾರದಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು.
–ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT