ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತೊಬ್ಬರನ್ನು ಹೀಗಳೆಯುವ, ಕೆಟ್ಟದಾಗಿ ಸಂದೇಶ ಕಳುಹಿಸುವ ಹಾಗೂ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳಡಿ ಅವಕಾಶವಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಬಂಧಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ತಂಡಗಳಿವೆ. ಆ ತಂಡಗಳ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುತ್ತಾರೆ