ಘನತೆಯಿಂದ ಸಾಯುವ ರೋಗಿಗಳ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನುಸಾರ, ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಅವಕಾಶ ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶಿಸಿದೆ. ಮಾರಣಾಂತಿಕ ಕಾಯಿಲೆಗಳಿಂದ ನರಳುತ್ತಿರುವವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ. ಭವಿಷ್ಯದಲ್ಲಿ ತನಗೆ ಎಂಥ ಚಿಕಿತ್ಸೆ ಸಿಗಬೇಕು ಎಂದು ರೋಗಿ ದಾಖಲಿಸುವ ಮರಣ ಇಚ್ಛೆಯ ಉಯಿಲನ್ನೂ ರಾಜ್ಯದಲ್ಲಿ ಜಾರಿಗೆ ತರಲು ಇಲಾಖೆ ಮುಂದಾಗಿದೆ. ಮಾನವ ಹಕ್ಕುಗಳ ದೃಷ್ಟಿಯಿಂದಲೂ ಈ ಆದೇಶ ಮುಖ್ಯವೆನಿಸಿದೆ