ಮೂರು ವರ್ಷಗಳ ಮಾತುಕತೆ ನಂತರ ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಅಂತಿಮಗೊಂಡಿದೆ. ಎರಡೂ ರಾಷ್ಟ್ರಗಳು ಇದನ್ನು ಚಾರಿತ್ರಿಕ ಎಂದು ಬಣ್ಣಿಸಿವೆ. ಜಗತ್ತಿನ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿರುವ ಭಾರತ ಮತ್ತು ಆರನೇ ದೊಡ್ಡ ಆರ್ಥಿಕತೆಯಾಗಿರುವ ಬ್ರಿಟನ್ ನಡುವಿನ ಈ ಒಪ್ಪಂದದಿಂದ ಸರಕು ಮತ್ತು ಸೇವೆಗಳ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಸಹಕಾರಿಯಾಗಲಿದೆ ಎಂದೂ ಹೇಳಲಾಗಿದೆ. ಬ್ರಿಟನ್‌ನ ಬಹುತೇಕ ವಸ್ತುಗಳು ಸುಂಕಮುಕ್ತವಾಗಿ ಭಾರತ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೆಲವು ಕೃಷಿ ಉತ್ಪನ್ನಗಳನ್ನು ಒಪ್ಪಂದದ ವ್ಯಾಪ್ತಿಯಿಂದ ಹೊರಗಿರಿಸಲಾಗಿದೆ.