1975: ಜನಸಂಘದ ಶಿಕಾರಿಪುರ ತಾಲ್ಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರು.

1977: ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಪುರಸಭಾ ಅಧ್ಯಕ್ಷರಾಗಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಅನುಷ್ಠಾನ ಆಗುವಂತೆ ನೋಡಿಕೊಂಡರು.

1981-82: ಯಡಿಯೂರಪ್ಪ ಅವರ ರಾಜಕೀಯ ಜೀವನದ ತಿರುವಿಗೆ ಕಾರಣವಾಗಿದ್ದು ಜೀತ ಪದ್ಧತಿಯ ವಿರುದ್ಧದ ಹೋರಾಟ. ಜೀತಮುಕ್ತರಿಗೆ ಪುನರ್ವಸತಿ ಕಲ್ಪಿಸಲು ಶಿಕಾರಿಪುರ ತಾಲ್ಲೂಕು ಪಂಚಾಯಿತಿ ಎದುರು ಸತತವಾಗಿ ಒಂದು ತಿಂಗಳು ಹಗಲು–ರಾತ್ರಿ ಧರಣಿ ನಡೆಸಿದರು. ಶಿಕಾರಿಪುರದಿಂದ ಶಿವಮೊಗ್ಗದ ತನಕ 2,000 ಮಂದಿ ಜೀತದಾಳುಗಳ ಜೊತೆ ಪಾದಯಾತ್ರೆ ಮಾಡಿದರು. ಈ ಹೋರಾಟದ ಮೂಲಕ ಜೀತದಾಳುಗಳಿಗೆ ಸೌಲಭ್ಯ ಕಲ್ಪಿಸಲು ಯಶಸ್ವಿಯಾದರು.

1983: ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಭಾರಿ ಮತಗಳ ಅಂತರದಿಂದ ಆಯ್ಕೆಯಾದದರು. ಅವರ ರಾಜಕೀಯ ಜೀವನದಲ್ಲಿ ಇದೊಂದು ಬಹುದೊಡ್ಡ ಮೈಲಿಗಲ್ಲು. ಆ ನಂತರ ಅವರು ತಿರುಗಿ ನೋಡಲಿಲ್ಲ. ಶಾಸಕರಾಗಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.

1983, 1985, 1989, 1994, 2004, 2008, 2013, 2018: ವಿಧಾನಸಭೆಗೆ ಆಯ್ಕೆ. ದೇವೇಗೌಡರು ಮತ್ತು ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಪ್ರಭಾವಿಯಾಗಿ ಕಾರ್ಯನಿರ್ವಹಿಸಿದರು.

1988: ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ. ಅಂದು ಪಕ್ಷಕ್ಕಾಗಿ ಪೂರ್ಣ ಸಮಯ ಕೊಡುತ್ತೇನೆಂದು ಪ್ರತಿಜ್ಞೆ ಮಾಡಿದ ಯಡಿಯೂರಪ್ಪ ಪಕ್ಷಕ್ಕಾಗಿ ದುಡಿದರು. ವಿಧಾನಸಭೆಯ ಹೊರಗೆ ಮತ್ತು ಒಳಗೆ ಜನಪರ ಹೋರಾಟಗಳನ್ನು ನಡೆಸಿ ರಾಜ್ಯದಲ್ಲಿ ಬಿಜೆಪಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 1997ರಲ್ಲಿ ಹಾಗೂ 2016ರಲ್ಲೂ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿದರು.

1992: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಲಾಲ್ಕೃಷ್ಣ ಅಡ್ವಾಣಿ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರ ಅಪೇಕ್ಷೆಯಂತೆ ಕರ್ನಾಟಕದಲ್ಲಿ ಬಿಜೆಪಿಯನ್ನು ಶಕ್ತಿಶಾಲಿಯನ್ನಾಗಿ ಕಟ್ಟಿ ಬೆಳೆಸಿದ ಕೀರ್ತಿ ಯಡಿಯೂರಪ್ಪ ಅವರದು.

2012: ಪಕ್ಷ ತನ್ನ ಪರವಾಗಿ ನಿಲ್ಲಲಿಲ್ಲ ಎಂದು ಸಿಟ್ಟಿಗೆದ್ದ ಅವರು ಪಕ್ಷ ತೊರೆದು ಕೆಜೆಪಿ ಕಟ್ಟಿದರು.

2014: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಮತ್ತೆ ಪಕ್ಷದಲ್ಲಿ ಸಕ್ರಿಯರಾದರು.

2014: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕೇಂದ್ರದಲ್ಲಿ ಕೃಷಿ ಸಚಿವರಾಗಬೇಕೆಂಬ ಅವರ ಆಸೆ ಕೈಗೂಡಲಿಲ್ಲ.

2018: ರಾಜ್ಯ ರಾಜಕಾರಣಕ್ಕೆ ಮರಳಿದರು.

ಜನಪರ ಕಾರ್ಯಕ್ರಮಗಳು

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ಹೊಂದಿದ್ದ ಯಡಿಯೂರಪ್ಪ, ಸಮಾಜದ ಕೆಡುಕುಗಳಿಗೆ ಕಾರಣವಾಗಿದ್ದ ಲಾಟರಿ ಹಾಗೂ ಸಾರಾಯಿ ನಿಷೇಧ ಮಾಡುವಲ್ಲಿ ಪ್ರಧಾನ ಪಾತ್ರ ವಹಿಸಿದರು.

2008-2011ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಸುಧಾರಣೆ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು.

2008: ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಶೂನ್ಯ ಬಡ್ಡಿ ದರದಲ್ಲಿ ರೈತರ ಕೃಷಿ ಸಾಲ ಯೋಜನೆ ಜಾರಿಗೊಳಿಸಿದರು.

ಸಾವಯವ ಕೃಷಿ ಯೋಜನೆ ರೂಪಿಸಿ ₹10.05 ಕೋಟಿ ವಿನಿಯೋಗ ಮಾಡಲಾಯಿತು. 83 ಸಾವಿರ ರೈತರನ್ನು ಇದರಲ್ಲಿ ತೊಡಗುವಂತೆ ಮಾಡಿ 76 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಇದನ್ನು ಜಾರಿಗೊಳಿಸಲಾಯಿತು.

ಸುವರ್ಣ ಭೂಮಿ ಯೋಜನೆಯಿಂದಾಗಿ 10 ಲಕ್ಷ ರೈತರ ಕುಟುಂಬಕ್ಕೆ ಅನುಕೂಲವಾಯಿತು.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಹುಟ್ಟಿದ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆಯಡಿ 10.18 ಲಕ್ಷ ಬಾಂಡ್ಗಳನ್ನು ವಿತರಿಸಲಾಯಿತು. ₹1,376 ಕೋಟಿ ಹಣವನ್ನು ಇದಕ್ಕೆ ವ್ಯಯಿಸಲಾಯಿತು.

ಸಂಧ್ಯಾ ಸುರಕ್ಷಾ ಯೋಜನೆಯಡಿ 65 ವರ್ಷ ಮೇಲ್ಪಟ್ಟ ಕಡುಬಡವರಿಗೆ ₹400 ಮಾಸಾಶನ ಘೋಷಣೆ.

ಸರ್ಕಾರಿ, ಅನುದಾನಿತ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ₹125 ಕೋಟಿ ವೆಚ್ಚದಲ್ಲಿ ಸೈಕಲ್ ವಿತರಣೆ.

ಆರೋಗ್ಯ ಕವಚ ಯೋಜನೆಯಡಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ತುರ್ತು ಸೇವೆಯ ವಾಹನಗಳನ್ನು ಜನರ ಬಳಕೆಗೆ ಬಿಡುಗಡೆ.

ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ₹1 ಲಕ್ಷ ರೂಪಾಯಿ ನೆರವು

ನೇಕಾರರ ₹1 ಲಕ್ಷದವರೆಗಿನ ಸಾಲ ಮನ್ನಾ, ಮೀನುಗಾರರ ಸಾಲ ಮನ್ನಾ, ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ವಿಮೆ ಪಾವತಿ, ಕೆರೆಗಳ ಪುನಶ್ಚೇತನಕ್ಕೆ ಮಿಷನ್ ಕಲ್ಯಾಣಿ ಯೋಜನೆಗಳ ಜಾರಿ.

ಕೋವಿಡ್ ಸೋಂಕಿನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಶಿಕ್ಷಣ ಒದಗಿಸಲು ತಿಂಗಳಿಗೆ ₹3,500 ನೀಡುವ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಜಾರಿ.

21 ವರ್ಷ ತುಂಬಿದ ಹೆಣ್ಣುಮಕ್ಕಳಿಗೆ ₹1 ಲಕ್ಷ ನೆರವು ಘೋಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.