ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬುಧವಾರದ ಸಾರ್ವತ್ರಿಕ ಮುಷ್ಕರದಿಂದ ರಾಜ್ಯದ ಜನಜೀವನಕ್ಕೆ ಯಾವುದೇ ತೊಂದರೆ ಆಗದಂತೆ ಸರ್ಕಾರ ನಿಗಾ ವಹಿಸಿದೆ. ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ಬೆಂಗಳೂರಿನ ನಮ್ಮ ಮೆಟ್ರೊ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಹಾಲು, ಔಷಧ, ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ಸೇವೆಯಲ್ಲಿಯೂ ಸಮಸ್ಯೆ ಕಾಣಿಸಿಕೊಂಡಿಲ್ಲ.ಮುಷ್ಕರದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಮತ್ತು ಇಲಾಖೆಗಳ ನೌಕರರು ಭಾಗವಹಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.