ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ (ಜ.28) ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಮಾರು ಒಂದು ಗಂಟೆ ಭಾಷಣ ಮಾಡಿದ್ದಾರೆ. ವಿವಿಧ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ ಭಾರತವು, ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ಸಾಮಾಜಿಕ ನ್ಯಾಯ ಸರ್ಕಾರದ ದೂರದೃಷ್ಟಿಯ ನಿಲುವು ಎಂದು ಅವರು ಹೇಳಿದ್ದಾರೆ.