ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು 2030–31ನೇ ಹಣಕಾಸು ವರ್ಷದ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು, ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆಗಳಿಗೆ ಆರ್ಥಿಕ ನೆರವು ಮುಂದುವರಿಸುವುದಕ್ಕೂ ಅನುಮೋದನೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.
The Union Cabinet, chaired by Hon'ble Prime Minister Shri @narendramodi, has approved the continuation of Atal Pension Yojana (APY) up to FY 2030-31 along with extension of funding support for promotional and developmental activities and gap funding.