ಗುರುವಾರ , ಸೆಪ್ಟೆಂಬರ್ 24, 2020
24 °C
ದೇಶದ ಪ್ರತಿಯೊಬ್ಬನಿಗೂ ಡಿಜಿಟಲ್ ಹೆಲ್ತ್ ಐಡಿ

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಘೋಷಿಸಿದ ಪ್ರಧಾನಿ ಮೋದಿ: ಏನಿದು ಯೋಜನೆ?

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narendra Modi independece day speech

ನವದೆಹಲಿ: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೊಸ ‘ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್’ ಯೋಜನೆ ಘೋಷಿಸಿದ್ದಾರೆ.

ಯೋಜನೆಯಡಿ ಪ್ರತಿಯೊಬ್ಬ ಭಾರತೀಯನಿಗೂ ಹೆಲ್ತ್ ಐಡಿ ನೀಡಲಾಗುವುದು. ಯೋಜನೆಯಿಂದ ಬಡವರಿಗೆ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದ್ದಾರೆ. ವೈದ್ಯರು ಯಾವ ಔಷಧ ತೆಗದುಕೊಳ್ಳಲು ಸೂಚಿಸಿದ್ದಾರೆ, ಯಾವಾಗ ಅದನ್ನು ಸೂಚಿಸಲಾಗಿದೆ ಎಂಬ ಮಾಹಿತಿ ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ವ್ಯಕ್ತಿಯ ಹೆಲ್ತ್ ಐಡಿಗೆ ಲಿಂಕ್ ಆಗಿರಲಿವೆ.

‘ಆಯುಷ್ಮಾನ್ ಭಾರತ’ದ ಬಳಿಕ ಆರೋಗ್ಯ ಕ್ಷೇತ್ರದ ಅತ್ಯಂತ ಮಹತ್ವದ ಯೋಜನೆ ಇದಾಗಿರಲಿದೆ ಎನ್ನಲಾಗಿದೆ.

ಏನಿದು ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್?

ಯೋಜನೆಯ ನೀಲನಕ್ಷೆಯನ್ನು ಕಳೆದ ವರ್ಷ ರೂಪಿಸಲಾಗಿತ್ತು. ದತ್ತಾಂಶಗಳು ಹಾಗೂ ಮೂಲಸೌಕರ್ಯ ಸೇವೆಗಳ ಮೂಲಕ ದಕ್ಷ ಮತ್ತು ಕೈಗೆಟಕುವ ದರಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸುರಕ್ಷತೆ ಒದಗಿಸುವ ಗುರಿ ಹೊಂದಿದೆ. ಇದು ತಂತ್ರಜ್ಞಾನ ಆಧಾರಿತ ಯೋಜನೆಯಾಗಿದ್ದು, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ. ಇದು ಅನೇಕ ಡಿಜಿಟಲ್ ಆರೋಗ್ಯ ಸೇವೆಗಳನ್ನು ಒಟ್ಟುಗೂಡಿಸಿ ಅಸ್ತಿತ್ವದಲ್ಲಿರುವ ಆರೋಗ್ಯ ಮಾಹಿತಿಗಳನ್ನು ಸಂಯೋಜಿಸಲು ನೆರವಾಗಲಿದೆ. ವೈಯಕ್ತಿಯಕ ಮಾಹಿತಿಯ ಸುರಕ್ಷತೆ ಮತ್ತು ಗೋಪ್ಯತೆಯನ್ನು ಖಾತರಿಪಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಏನಿದು ಹೆಲ್ತ್ ಐಡಿ?

ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಡಿಜಿಟಲ್ ಹೆಲ್ತ್ ಐಡಿ ದೊರೆಯಲಿದೆ. ವ್ಯಕ್ತಿಯ ಆರೋಗ್ಯ ದಾಖಲೆಗಳು ಡಿಜಿಟಲ್ ಸ್ವರೂಪದಲ್ಲಿ ಇರಲಿದ್ದು, ದೇಶದಾದ್ಯಂತ ಇರುವ ವೈದ್ಯರು ಮತ್ತು ಸರ್ಕಾರದ ಆರೋಗ್ಯ ಸೌಲಭ್ಯಗಳೊಂದಿಗೆ ಲಿಂಕ್ ಆಗಿರಲಿದೆ.

ಯಾಕಾಗಿ ಯೋಜನೆ?

ಆರೋಗ್ಯ ಸೇವೆಗಳ ದಕ್ಷತೆ, ಪರಿಣಾಮ ಮತ್ತು ಪಾರದರ್ಶಕತೆ ಹೆಚ್ಚಿಸುವ ಸಲುವಾಗಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಹೆಲ್ತ್ ಐಡಿಯು ಮೊಬೈಲ್ ಆ್ಯಪ್ ರೂಪದಲ್ಲಿ ಇರಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು