ಕೋವಿಡ್ ಕಾಟ ಹಾಗೂ ಅದರ ನಿಯಂತ್ರಣಕ್ಕೆ ವಿಧಿಸಿದ ಲಾಕ್ಡೌನ್ನಿಂದ ಎಲ್ಲ ವಲಯಗಳ ಭವಿಷ್ಯ ಮಸುಕಾಗಿರುವ ಹೊತ್ತಿನಲ್ಲಿ ಕೃಷಿ ವಲಯ ಮಾತ್ರ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ. ಉತ್ತಮ ಮುಂಗಾರು ಇದಕ್ಕೆ ಮುಖ್ಯ ಕಾರಣವಾಗಿದೆ. ಜೂನ್ ತಿಂಗಳ ಮೊದಲ ವಾರ ಆರಂಭವಾದ ಮಳೆ, ಜುಲೈ ಮಧ್ಯಭಾಗದ ಹೊತ್ತಿಗೆ ಬಿರುಸು ಪಡೆದಿದೆ. ದೇಶದಲ್ಲಿ ಇದುವರೆಗೆ ವಾಡಿಕೆಗಿಂತ ಶೇ 18ರಷ್ಟು ಹೆಚ್ಚು ಮಳೆ ಸುರಿದಿದೆ.

ನಗರ ಪ್ರದೇಶಗಳಿಗೆ ವಲಸೆ ಹೋಗಿ ದ್ದವರು ಲಾಕ್ಡೌನ್ ಕಾರಣದಿಂದ ಊರುಗಳಿಗೆ ವಾಪಸ್ ಆಗಿದ್ದರಿಂದ ಹಳ್ಳಿಗಳು ತುಂಬಿ ತುಳುಕುತ್ತಿವೆ. ಹೀಗಾಗಿ ಬೇಸಾಯದ ಚಟುವಟಿಕೆಗಳು ಈಗ ಮಾಮೂಲಿಗಿಂತ ಹೆಚ್ಚಾಗಿ ನಡೆಯುತ್ತಿವೆ. ಪ್ರಸಕ್ತ ಹಂಗಾಮಿನಲ್ಲಿ ಶೇ 88ರಷ್ಟು ಕೃಷಿ ಪ್ರದೇಶದಲ್ಲಿ ಈಗಾಗಲೇ ಬಿತ್ತನೆಯಾಗಿದೆ. ಕಳೆದ ವರ್ಷದ ಬಿತ್ತನೆಗೆ ಹೋಲಿಸಿದರೆ ಆ ಪ್ರಮಾಣ ಈಗ ದುಪ್ಪಟ್ಟಾಗಿದೆ. ಎನ್ನುತ್ತವೆ ಕೃಷಿ ಇಲಾಖೆಯು ನೀಡುವ ಅಂಕಿ ಅಂಶಗಳು. ಉತ್ತರ ಭಾರತದ ಹಲವು ರಾಜ್ಯಗಳ ಕೃಷಿ ಪ್ರದೇಶದಲ್ಲಿ ಮಿಡತೆಗಳ ಕಾಟ ರೈತರನ್ನು ಕಂಗೆಡಿ ಸಿತ್ತು. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

‘ಸಕಾಲದಲ್ಲಿ ಮಳೆ ಸುರಿದಿರುವುದು ಹಾಗೂ ಕೃಷಿ ಉತ್ಪನ್ನ ಗಳ ಬೆಂಬಲ ಬೆಲೆಯಲ್ಲಿ ಏರಿಕೆ ಮಾಡಿರುವುದು ಬಿತ್ತನೆ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ’ ಎಂದು ಕೃಷಿತಜ್ಞರು ವಿಶ್ಲೇಷಿಸುತ್ತಾರೆ. ಕಳೆದ ಸಲಕ್ಕೆ ಹೋಲಿಸಿದರೆ ಈ ಬಾರಿ ಸುಮಾರು 20 ಲಕ್ಷ ಹೆಕ್ಟೇರ್ನಷ್ಟು ಅಧಿಕ ಭೂಮಿಯಲ್ಲಿ ಭತ್ತವನ್ನು ಬೆಳೆಯಲಾಗುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಿಂದ ಅಕ್ಕಿಯ ರಫ್ತು ಮತ್ತಷ್ಟು ಹೆಚ್ಚಲಿದೆ ಎಂದೂ ಅಂದಾಜಿಸಲಾಗಿದೆ.

ಕರ್ನಾಟಕದಲ್ಲಿ 110 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ನಡೆದಿವೆ ಎನ್ನುವುದು ರಾಜ್ಯ ಕೃಷಿ ಇಲಾಖೆಯ ವಿವರಣೆ. ಲಾಕ್ಡೌನ್ ಅವಧಿಯಲ್ಲಿ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಳ್ಳಲು ರೈತರಿಗೆ ಯಾವ ತೊಂದರೆಯೂ ಆಗಿಲ್ಲ. ಭತ್ತ, ಕಬ್ಬು, ಹತ್ತಿ, ಆಹಾರ ಧಾನ್ಯ, ಎಣ್ಣೆಬೀಜ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗಿದೆ. ಮಲೆನಾಡಿನಲ್ಲಿ ಮಾತ್ರ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ, ಕೃಷಿ ಚಟುವಟಿಕೆಗಳಿಗೆ ಏನೂ ತೊಡಕಾಗಿಲ್ಲಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ರಸಗೊಬ್ಬರ ಮಾರಾಟ:ರಸಗೊಬ್ಬ ರಗಳ ಮಾರಾಟದಲ್ಲೂ ಭಾರಿ ಏರಿಕೆ ಕಂಡುಬಂದಿದ್ದು, ಕೋವಿಡ್ನಿಂದ ಬೇಸಾಯ ಚಟುವಟಿಕೆಗಳಿಗೆ ಅಡ್ಡಿ ಉಂಟಾಗಿಲ್ಲ. ಏಪ್ರಿಲ್ನಿಂದ ಜೂನ್ವರೆಗಿನ ಅವಧಿಯಲ್ಲಿ ದೇಶದಾದ್ಯಂತ ರೈತರು 111.61 ಲಕ್ಷ ಟನ್ ರಸಗೊಬ್ಬರ ಖರೀದಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ 82.81ರಷ್ಟು ಏರಿಕೆಯಾಗಿದೆ.

ಈಶಾನ್ಯ ಭಾರತದಲ್ಲಿ ಪ್ರವಾಹದ ಅಬ್ಬರ
ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ನಡುವೆಯೇ ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿಪ್ರವಾಹದ ಬಿಕ್ಕಟ್ಟು ಶುರುವಾಗಿದೆ. ಅಸ್ಸಾಂ ಒಂದರಲ್ಲೇ 68 ಜನರು ಪ್ರವಾಹ ಸಂಬಂಧಿ ಘಟನೆಗಳಿಂದ ಮೃತಪಟ್ಟಿದ್ದಾರೆ. 30 ಜಿಲ್ಲೆಗಳಲ್ಲಿ ಸುಮಾರು 48 ಲಕ್ಷ ಜನರು ಪ್ರವಾಹದ ಸಂತ್ರಸ್ತರಾಗಿದ್ದಾರೆ. 4,500 ಹಳ್ಳಿಗಳು ತೊಂದರೆಗೆ ಈಡಾಗಿವೆ. ಪರಿಹಾರ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯು ಅಂತರ ಕಾಯ್ದುಕೊಳ್ಳುವುದು ಕಠಿಣವಾಗಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

ಅಸ್ಸಾಂನಲ್ಲಿ ಒಂದು ವಾರದಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಜುಲೈ 9ರಿಂದ ಜುಲೈ 16ರವರ ಅವಧಿಯಲ್ಲಿ ಅಲ್ಲಿ ವಾಡಿಕೆಗಿಂತ ಶೇ 64ರಷ್ಟು ಹೆಚ್ಚು ಮಳೆ ಸುರಿದಿದೆ.

ರಾಷ್ಟ್ರೀಯ ಉದ್ಯಾನ ಜಲಾವೃತ:ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, ಕನಿಷ್ಠ 66 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ. ರಾಜ್ಯದಲ್ಲಿ ಪ್ರವಾಹವು ಈ ಬಾರಿ ಅತಿಹೆಚ್ಚು ಹಾನಿ ಉಂಟುಮಾಡಿದೆ.

ಮಳೆಯಲ್ಲಿ ಮುಳುಗೇಳುತ್ತಿರುವ ಮುಂಬೈ:ದೇಶದಾದ್ಯಂತ ಮುಂಗಾರು ಕಾವು ಪಡೆದುಕೊಳ್ಳುತ್ತಿದ್ದು, ಗುಜರಾತ್, ಮಹಾರಾಷ್ಟ್ರದಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ಹೆಚ್ಚು ಮಳೆ ಸುರಿದಿದ್ದು, ಇನ್ನಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ನಗರ ಮಳೆಯಲ್ಲಿ ಮುಳುಗೇಳುತ್ತಿದೆ. ನೆರೆಯ ಗೋವಾದಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಹಿಮಾಲಯದ ಲಡಾಖ್ ಪ್ರದೇಶದಲ್ಲಿ ಶೇ 63ರಷ್ಟು ಹೆಚ್ಚು ಮಳೆ ಸುರಿದಿದೆ.ಮೇಘಾಲಯದಲ್ಲಿ ಶೇ 45, ಅರುಣಾಚಲ ಪ್ರದೇಶದಲ್ಲಿ ಶೇ 13ರಷ್ಟು ಅಧಿಕ ಮಳೆ ಸುರಿದಿದೆ. ಆಂಧ್ರದಲ್ಲಿ ಶೇ 61, ಬಿಹಾರದಲ್ಲಿ ಶೇ 57, ಗುಜರಾತ್ನಲ್ಲಿ ಶೇ 31, ಉತ್ತರ ಪ್ರದೇಶದಲ್ಲಿ ಶೇ 27ರಷ್ಟು ಅಧಿಕ ಮಳೆಯಾಗಿದೆ.

ಕೇರಳ, ಹಿಮಾಲಯ ಭಾಗದಲ್ಲಿ ಮಳೆ ಕೊರತೆ:ಈ ವರ್ಷ ದೆಹಲಿಯಲ್ಲಿ ಕಡಿಮೆ ಮಳೆಯಾಗಿದೆ. ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿಯಲ್ಲಿ ಶೇ 50ರಷ್ಟು ಮಳೆ ಕೊರತೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಚುರುಕಾಗಲಿದೆ. ಹಿಮಾಲಯ ಭಾಗದ ಹಿಮಾಚಲ ಪ್ರದೇಶದಲ್ಲಿ ಶೇ 28ರಷ್ಟು ಮಳೆ ಕೊರತೆ ಕಂಡುಬಂದಿದೆ. ಜಮ್ಮು ಕಾಶ್ಮೀರವೂ ಮಳೆ ಕೊರತೆ ಎದುರಿಸಿದೆ. ಪ್ರಸಕ್ತ ಹಂಗಾಮಿನ ಮೊದಲ ಮಳೆ ಕಂಡಿದ್ದ ಕೇರಳದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 22ರಷ್ಟು ಮಳೆ ಕೊರತೆ ಕಂಡುಬಂದಿದೆ.ಅತ್ತ ಅಸ್ಸಾಂನಲ್ಲಿ ಮಳೆಯಿಂದ ಪ್ರವಾಹ ಉಂಟಾಗಿದ್ದರೆ, ಈಶಾನ್ಯ ಭಾರತದ ಮಣಿಪುರ ಶೇ 44ರಷ್ಟು, ಮಿಜೋರಾಂನಲ್ಲಿ ಶೇ 38ರಷ್ಟು ಮಳೆ ಕೊರತೆ ಕಂಡುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.