ಲಂಚ, ವಂಚನೆ ಹಾಗೂ ನಂಬಿಕೆ ದ್ರೋಹದಂತ ಆರೋಪ ಎದುರಿಸುತ್ತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇದೇ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿ, ನ್ಯಾಯಾಲಯದ ಕಟಕಟೆಯಲ್ಲಿ ಇಂದು (ಡಿ. 10) ನಿಂತರು. ತಮ್ಮ ವಿರುದ್ಧದ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. ಆರೋಪ ಸಾಬೀತಾದರೆ ಅವರ ಮುಂದಿನ ಭವಿಷ್ಯವೇನಾಗಲಿದೆ ಎಂಬ ಚರ್ಚೆ ಈಗ ನಡೆಯುತ್ತಿದೆ.