
ಬಂಡೀಪುರದ ಹಡಿಯಾಳ ವಲಯದಲ್ಲಿ ಸಿಬ್ಬಂದಿ ಏಕಾಂಗಿಯಾಗಿ ದೊಣ್ಣೆ ಹಿಡಿದುಗಸ್ತು ಮಾಡುತ್ತಿರುವುದು.
ಪ್ರಜಾವಾಣಿ ಸಂಗ್ರಹದಿಂದ
ಹೊರಗುತ್ತಿಗೆ ಬದಲಿಸುವಂತೆ ಕೋರಿದ್ದರೂ ಪೂರಕ ಸ್ಪಂದನೆ ಸಿಕ್ಕಿಲ್ಲ. ಜನವರಿಯಲ್ಲಿ ಬಂಡೀಪುರದಲ್ಲಿ ಹೋರಾಟ ನಡೆಸುತ್ತೇವೆ. ಮಾರ್ಚ್ ನಂತರ ಕೆಲಸ ನಿಲ್ಲಿಸಿ ಹೋರಾಡುತ್ತೇವೆಎ.ಎಂ. ನಾಗರಾಜು, ಗೌರವ ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ, ಹೊರಗುತ್ತಿಗೆ ನೌಕರರ ಸಂಘ. ಬೆಂಗಳೂರು.

ಸಿಎಂ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ಸರ್ಕಾರದ ಹಂತದಲ್ಲಿ ಪ್ರಯತ್ನಗಳು ಆಗಿವೆ. ಆದರೆ ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲಹರೀಶ್, ಉಪಾಧ್ಯಕ್ಷ ಹೊರಗುತ್ತಿಗೆ ನೌಕರರ ಸಂಘ ಮಡಿಕೇರಿ
ಮುಂಚೂಣಿ ಸಿಬ್ಬಂದಿ ವನ್ಯಜೀವಿ ಹಾಗೂ ಅರಣ್ಯ ಸಂಪತ್ತು ಸಂರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ದುರ್ಗಮ ಪರಿಸ್ಥಿತಿಯಲ್ಲೂ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಸಕಾಲದಲ್ಲಿ ವೇತನ, ಪಿಎಫ್, ಇಎಸ್‌ಐ ಸೌಲಭ್ಯಗಳು ಸಿಗಬೇಕು.ಗಿರಿಧರ ಕುಲಕರ್ಣಿ, ವನ್ಯಜೀವಿ ಸಂರಕ್ಷಣಾವಾದಿ
ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಸಹಿತ 4 ಸಾವಿರ ಹುದ್ದೆ ಸೇರಿ 6 ಸಾವಿರ ಹುದ್ದೆ ಖಾಲಿ ಇವೆ. ಹೊರಗುತ್ತಿಗೆ ಆಧಾರದಲ್ಲಿ 3800 ನೌಕರರು ಕೆಲಸ ಮಾಡುತ್ತಿದ್ದಾರೆ. ವೇತನ, ಸೌಲಭ್ಯ ವಿಚಾರದಲ್ಲಿ ದೂರುಗಳಿದ್ದು, ನೋಟಿಸ್ ನೀಡಿ ಕ್ರಮ ವಹಿಸಲಾಗುತ್ತಿದೆಕುಮಾರ ಪುಷ್ಕರ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ( ಆಡಳಿತ, ಸಮನ್ವಯ).
ಮುಂಚೂಣಿ ಹೊರಗುತ್ತಿಗೆ ಸಿಬ್ಬಂದಿಯ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿಗೂ ₹20 ಲಕ್ಷ ವಿಮೆ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆಈಶ್ವರ ಖಂಡ್ರೆ, ಅರಣ್ಯ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.