ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

7

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Published:
Updated:

ವಿಜಯಪುರ:  ಭೀಮಾ ತೀರದ ರೌಡಿಗಳಾದ ಧರ್ಮರಾಜ ಚಡಚಣನ ಎನ್‌ಕೌಂಟರ್, ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿ, ನ್ಯಾಯಾಂಗ ಬಂಧನದಲ್ಲಿದ್ದ 14 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 31ರವರೆಗೆ ವಿಸ್ತರಿಸಿ, ಇಂಡಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಎರಡೂ ಪ್ರಕರಣದ ಆರೋಪಿಗಳನ್ನು ಸಿಐಡಿ ಪೊಲೀಸರು ಇಂಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ಅರವಿಂದ ಹಂಗರಗಿ ಪ್ರಮುಖ ಆರೋಪಿಗಳಾದ ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡ, ಪಿಎಸ್‌ಐ ಗೋಪಾಲ ಹಳ್ಳೂರ ಸೇರಿದಂತೆ ಇನ್ನಿತರರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದರು ಎಂದು ಮೂಲಗಳು ತಿಳಿಸಿವೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !