ಬುಧವಾರ, ಜುಲೈ 6, 2022
23 °C

Factcheck: ಎಎಪಿ ಅಧಿಕಾರಕ್ಕೆ ಬಂದ ಬಳಿಕ ಖಾಲಿಸ್ತಾನಕ್ಕೆ ಮರುಜೀವ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟರ್ಬನ್ ಸುತ್ತಿಕೊಂಡು ಕೈಯಲ್ಲಿ ಸಿಖ್ ಧ್ವಜ ಹಿಡಿದ ಕೆಲವರು ‘ಖಾಲಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಯ ಗಳಿಸಿದ ಬಳಿಕ ರಾಜ್ಯದಲ್ಲಿ ಖಾಲಿಸ್ತಾನ್‌ ಚಳವಳಿಗೆ ಮರುಜೀವ ಸಿಕ್ಕಿದೆ ಎಂಬ ಅರ್ಥದಲ್ಲಿ ಚರ್ಚೆಗಳು ಶುರುವಾಗಿವೆ. ‘ಎಎಪಿ ಗೆಲುವಿನೊಂದಿಗೆ ರಾಜ್ಯದಲ್ಲಿ ಬದಲಾವಣೆ ಶುರುವಾಗಿದೆ’ ಎಂದು ಕೆಲವರು ಉಲ್ಲೇಖಿಸಿದ್ದಾರೆ.

ಪಂಜಾಬ್ ಚುನಾವಣೆಗೂ, ಈ ವಿಡಿಯೊಗೂ ಸಂಬಂಧವಿಲ್ಲ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್ ತಿಳಿಸಿದೆ. ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ಸುದ್ದಿಯಾಗಿದ್ದ ಹಾಗೂ ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ದೀಪ್ ಸಿಧು ನೆನಪಿನಲ್ಲಿ ಭಟಿಂಡಾದಲ್ಲಿ ನಡೆದ ಮೆರವಣಿಗೆಯಲ್ಲಿ ಖಾಲಿಸ್ತಾನ್ ಪರ ಘೋಷಣೆ ಕೂಗಲಾಗಿತ್ತು. ಈ ವಿಡಿಯೊ ಫೆ.22ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಆಗಿದೆ. ಪಂಜಾಬ್ ಫಲಿತಾಂಶ ಪ್ರಕಟವಾಗಿದ್ದು ಮಾರ್ಚ್ 10ರಂದು ಎಂದು ವೆಬ್‌ಸೈಟ್ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು