ಶುಕ್ರವಾರ, ಮೇ 27, 2022
29 °C

ಫ್ಯಾಕ್ಟ್‌ ಚೆಕ್‌: ಲವ್ ಜಿಹಾದ್‌ ಆರೋಪ ನಿಜವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯುವಕನೊಬ್ಬ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬೀದಿಯಲ್ಲಿ ಸಾಯಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮುರ್ಷಿದಾಬಾದ್‌ನ ಬಹರಾಮ್‌ಪುರದಲ್ಲಿ ನಡೆದ ಈ ಘಟನೆ ‘ಲವ್’ ಜಿಹಾದ್‘ಗೆ ಸಂಬಂಧಿಸಿದ್ದು ಎಂಬುದಾಗಿ ಚರ್ಚೆಯಾಗುತ್ತಿದೆ. ‘ಆರೋಪಿ ಯುವಕ ಮುಸ್ಲಿಂ ಧರ್ಮದವನಾಗಿದ್ದು, ಮತಾಂತರ ಆಗಲು ಒಪ್ಪದ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ’ ಎನ್ನಲಾಗಿದೆ. ‘ಇಸ್ಲಾಮಿಕ್ ಸ್ಟೇಟ್ ಬಂಗಾಳಕ್ಕೆ ಸ್ವಾಗತ’ ಎಂಬುದಾಗಿ ಕೆಲವರು ಟ್ವಿಟರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಘಟನೆಯ ಬಗ್ಗೆ ಎಬಿಪಿ ಮೊದಲಾದ ಸುದ್ದಿವಾಹಿನಿಗಳು ವರದಿ ಮಾಡಿದ್ದು, ಲವ್‌ ಜಿಹಾದ್‌ಗೂ ಈ ಘಟನೆಗೂ ಸಂಬಂಧವಿಲ್ಲ ಎಂದು ಇಂಡಿಯಾಟುಡೇ ವರದಿ ಮಾಡಿದೆ. ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಹಿಂದೂ ಧರ್ಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆರೋಪಿ ಸುಶಾಂತ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ. ‘ಯುವತಿ ನನ್ನೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿರಲಿಲ್ಲ’ ಎಂದು ಆರೋಪಿ ಹೇಳಿದ್ದಾನೆ. ಮುರ್ಷಿದಾಬಾದ್‌ ಎಸ್‌ಪಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಲವ್‌ ಜಿಹಾದ್ ಅಂಶವನ್ನು ಪ್ರಸ್ತಾಪಿಸಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು