ಮಂಗಳವಾರ, ಜೂನ್ 22, 2021
27 °C

Fact Check: ಕೋಳಿಗಳಿಂದ ಕಪ್ಪು ಶಿಲೀಂಧ್ರ ಸೋಂಕು ಹರಡುತ್ತದೆಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್‌ ಎರಡನೇ ಅಲೆ ದೇಶದಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಜೊತೆಗೇ ಬಂದಿರುವ ಕಪ್ಪು ಶಿಲೀಂಧ್ರ ಸೋಂಕು ಹಾಗೂ ಬಿಳಿ ಶಿಲೀಂಧ್ರ ಸೋಂಕುಗಳು ಎಲ್ಲರ ಚಿಂತೆ ಹೆಚ್ಚಿಸಿವೆ. ಶಿಲೀಂಧ್ರ ಸೋಂಕು ಚಿಕಿತ್ಸೆಗೆ ಬೇಕಾದ ಔಷಧ ಕೊರತೆ ಇದೆ. ಫಾರಂ ಕೋಳಿಗಳಿಂದ ಮನುಷ್ಯರಿಗೆ ಸೋಂಕು ಹರಡಬಹುದು. ಪಂಜಾಬ್ ಸರ್ಕಾರವು ಅಂತಹ ಕೋಳಿ ಫಾರಂ ಅನ್ನು ಗುರುತಿಸಿದೆ ಎಂದು ಹೇಳುವ ಚಿತ್ರವು ವೈರಲ್ ಆಗಿದೆ. 

ಕೋಳಿಗಳಿಂದ ಸೋಂಕು ಮನುಷ್ಯರಿಗೆ ಹರಡುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. ಕಪ್ಪು ಶಿಲೀಂಧ್ರ ಸೋಂಕು ಹರಡುವ ಬಗ್ಗೆ ಸರ್ಕಾರ ಅಥವಾ ವೈದ್ಯಕೀಯ ಸಂಸ್ಥೆ ತಿಳಿಸುವ ಮಾಹಿತಿಗಳನ್ನು ಮಾತ್ರ ಹಂಚಿಕೊಳ್ಳಿ ಎಂದು ಸಲಹೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ಪೋಸ್ಟರ್ ತಪ್ಪು ಮಾಹಿತಿಯಿಂದ ಕೂಡಿದೆ ಎಂದು ವೇದಿಕೆ ಸ್ಪಷ್ಟಪಡಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು