ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ಗೆ ಲಸಿಕೆ ಅಭಿವೃದ್ಧಿ

Last Updated 26 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ
ADVERTISEMENT
""

ಸುದ್ದಿ: ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕೋವಿಡ್‌–19ಕ್ಕೆ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಗುರುವಾರದಿಂದ ಅದನ್ನು ಮನುಷ್ಯರ ಮೇಲೆ ಪ್ರಯೋಗಿಸಲು ಆರಂಭಿಸಲಾಗಿದೆ ಎಂದು ಬ್ರಿಟನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಸುದ್ದಿಯಾಗಿದೆ.

ವಾಸ್ತವ: ಜಾಗತಿಕ ಮಟ್ಟದ ಏಳು ಕಂಪನಿಗಳ ಸಹಯೋಗದಲ್ಲಿ, ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದು ನಿಜ. ಈ ಏಳು ಕಂಪನಿಗಳಲ್ಲಿ ಭಾರತದ ‘ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ’ಸಹ ಸೇರಿದೆ. ಅಷ್ಟೇ ಅಲ್ಲ, ‘ಮುಂದಿನ ಎರಡು ಮೂರು ವಾರಗಳಲ್ಲಿ ಈ ಲಸಿಕೆಯ ಉತ್ಪಾದನೆಯನ್ನು ಆರಂಭಿಸಲಾಗುವುದು, ಅಕ್ಟೋಬರ್‌ ವೇಳೆಗೆ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಉದ್ದೇಶವಿದೆ’ ಎಂದು ಸೆರಂ ಇನ್‌ಸ್ಟಿಟ್ಯೂಟ್‌ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT