ಶನಿವಾರ, ಮೇ 30, 2020
27 °C

ಫ್ಯಾಕ್ಟ್‌ ಚೆಕ್‌ | ವಲಸೆ ಕಾರ್ಮಿಕರು ಉತ್ತರ ಪ್ರದೇಶ ಗಡಿಯಲ್ಲಿ ಸೇರಿದ್ದು ನಿಜವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಕ್‌ಡೌನ್ ಕಾರಣವಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿದ್ದ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ರಾಜ್ಯದ ಗಡಿಯಲ್ಲಿ ಜಮಾವಣೆಗೊಂಡಿದ್ದಾರೆ. ಆದರೆ ಗಡಿ ಪ್ರವೇಶಿಸಲು ಸರ್ಕಾರ ಅವಕಾಶ ನೀಡಿಲ್ಲ. ಯಾರೂ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ದೃಶ್ಯ ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದು ಹಳೆಯ ವಿಡಿಯೊ ಎಂಬ ಅಂಶವನ್ನು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ಪತ್ತೆಹಚ್ಚಿದೆ. ಗಾಜಿಯಾಬಾದ್‌ನಲ್ಲಿ  2019ರಲ್ಲಿ ನಡೆದ ಸೇನಾ‌ ನೇಮಕಾತಿಯ ವಿಡಿಯೊ ಇದು ಎಂದು ಸ್ಪಷ್ಟಪಡಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು