ಭಾನುವಾರ, ಆಗಸ್ಟ್ 9, 2020
21 °C

ಐಎಎಫ್‌ನ ಹೆಲಿಕಾಪ್ಟರ್ ಹೊಡೆದುರುಳಿಸಿದ ನೇಪಾಳ, ಪೈಲಟ್‌ನನ್ನು ಸೆರೆಹಿಡಿದಿದೆಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಭಾರತ–ಚೀನಾ ಗಡಿ ಬಿಕ್ಕಟ್ಟಿನ ನಡುವೆಯೇ ಭಾರತೀಯ ವಾಯುಪಡೆಯ (ಐಎಎಫ್) ರುದ್ರ ಹೆಲಿಕಾಪ್ಟರ್ ಅನ್ನು ನೇಪಾಳ ಹೊಡೆದುರುಳಿಸಿದ್ದು, ಒಬ್ಬ ಪೈಲಟ್‌ನನ್ನು ಸೆರೆ ಹಿಡಿಯಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಗಸದಲ್ಲಿ ಹೆಲಿಕಾಪ್ಟರ್ ಅನ್ನು ಕ್ಷಿಪಣಿಯೊಂದು ರಭಸದಿಂದ ಹೊಡೆದು ಹಾಕುವ ದೃಶ್ಯ 30 ಸೆಕೆಂಡ್‌ಗಳ ವಿಡಿಯೊದಲ್ಲಿ ಇದೆ. 

ಈ ಸುದ್ದಿ ಸುಳ್ಳು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಈ ವಿಡಿಯೊವನ್ನು 2012ರಲ್ಲಿ ಚಿತ್ರೀಕರಿಸಲಾಗಿದೆ. ರಾಯಿಟರ್ಸ್ ಸುದ್ದಿಸಂಸ್ಥೆಯ ಪ್ರಕಾರ, ಸಿರಿಯಾದಲ್ಲಿ ಈ ಘಟನೆ ನಡೆದಿದೆ. ಬಂಡುಕೋರರು ಹೆಲಿಕಾಪ್ಟರ್ ಅನ್ನು ಹೊಡೆದುಹಾಕಿದೆ. ಈ ಸುದ್ದಿ ಅಥವಾ ವಿಡಿಯೊ ನೇಪಾಳ ಅಥವಾ ಐಎಎಫ್‌ಗೆ ಸಂಬಂಧಿಸಿದ್ದಲ್ಲ ಎಂಬುದು ಸ್ಪಷ್ಟವಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು