ಮಂಗಳವಾರ, ಜನವರಿ 19, 2021
21 °C

ಫ್ಯಾಕ್ಟ್‌ಚೆಕ್: ರೈಲ್ವೆ ನೌಕರರ ಪ್ರಯಾಣ ಭತ್ಯೆ ಶೇ 50ರಷ್ಟು ಕಡಿತ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರೈಲ್ವೆ ಸಚಿವಾಲಯವು ಕೋವಿಡ್ ಕಾರಣದಿಂದಾಗಿ ಪೂರ್ಣ ಪ್ರಮಾಣದಲ್ಲಿ ರೈಲುಗಳನ್ನು ಓಡಿಸುತ್ತಿಲ್ಲ. ಹೀಗಾಗಿ ಸಚಿವಾಲಯದ ಆದಾಯಕ್ಕೆ ಕತ್ತರಿ ಬಿದ್ದಿದೆ. ಅದನ್ನು ಸರಿದೂಗಿಸುವ ಉದ್ದೇಶದಿಂದ ರೈಲ್ವೆ ನೌಕರರ ಪ್ರಯಾಣ ಭತ್ಯೆಯಲ್ಲಿ (ಟಿಎ) ಶೇ 50ರಷ್ಟು ಕಡಿತ ಮಾಡಲಿದೆ. ಒಟಿ (ಓವರ್‌ಟೈಮ್) ಸೌಲಭ್ಯವನ್ನು ಹಿಂತೆಗೆದುಕೊಳ್ಳಲಾಗಿದ್ದು, ಸುಮಾರು 13 ಲಕ್ಷ ನೌಕರರಿಗೆ ಇದು ಅನ್ವಯವಾಗಲಿದೆ ಎಂದು ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ ಚೆಕ್ ತಿಳಿಸಿದೆ. ಸಚಿವಾಲಯವು ಒಟಿ ಹಾಗೂ ಟಿಎ ಕಡಿತಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು