ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್ ಚೆಕ್: ಸರ್ವಶಿಕ್ಷಣ ಅಭಿಯಾನದಡಿ ಎಲ್ಲರಿಗೂ ಉದ್ಯೋಗ– ನಿಜ ಸಂಗತಿ ಏನು?

Last Updated 9 ಫೆಬ್ರುವರಿ 2022, 20:00 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರದ ಸರ್ವಶಿಕ್ಷಣ ಅಭಿಯಾನವು ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಹೊಂದಿದೆ. ಈ ಅಭಿಯಾನದ ಅಡಿಯಲ್ಲಿ ಉದ್ಯೋಗ ಅವಕಾಶಗಳನ್ನೂ ಇಲಾಖೆ ನೀಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಸರ್ವಶಿಕ್ಷ ಡಾಟ್‌ ಆನ್‌ಲೈನ್’ ಹೆಸರಿನ ವೆಬ್‌ಸೈಟ್‌ ಮುಖಪುಟದ ಚಿತ್ರವನ್ನು ಹಲವರು ಹಂಚಿಕೊಂಡಿದ್ದು, ವಿವಿಧ ಹುದ್ದೆಗಳಿಗೆ ಉದ್ಯೋಗ ನೇಮಕಾತಿಯನ್ನು ಪ್ರಕಟಿಸಲಾಗಿದೆ ಎಂದು ಇದರಲ್ಲಿ ತಿಳಿಸಲಾಗಿದೆ.

‘ಸರ್ವಶಿಕ್ಷ ಡಾಟ್‌ ಆನ್‌ಲೈನ್’ ಹೆಸರಿನ ವೆಬ್‌ಸೈಟ್‌ ನಕಲಿ ಎಂದು ಕೇಂದ್ರ ಸರ್ಕಾರದ ಪಿಐಬಿ ಫ್ಯಾಕ್ಟ್‌ಚೆಕ್ ವೇದಿಕೆ ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಟ್ಯಾಗ್‌ ಮಾಡಿ ಟ್ವೀಟ್ ಮಾಡಿರುವ ಪಿಐಬಿ, ಸರ್ವಶಿಕ್ಷಣ ಹೆಸರಿನಲ್ಲಿ ವಂಚಿಸುವವರ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿದೆ. ಸರ್ವಶಿಕ್ಷಣ ಹಾಗೂ ಶಿಕ್ಷಣ ಸಚಿವಾಲಯಕ್ಕೆ ಸಂಬಂಧಪಟ್ಟ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ (https://samagra.education.gov.in) ಭೇಟಿ ನೀಡುವಂತೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT