ಫ್ಯಾಕ್ಟ್ ಚೆಕ್: ಮಹಿಳೆಯರು ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರೇ?

ಬಾಂಗ್ಲಾದೇಶ ಹಾಗೂ ಭಾರತದಲ್ಲಿ ಏಕಕಾಲಕ್ಕೆ ಎರಡು ಚಿತ್ರಗಳು ವೈರಲ್ ಆಗಿವೆ. ಕಪ್ಪು ಬಿಳುಪು ಚಿತ್ರದಲ್ಲಿರುವ ಮಹಿಳೆಯರೇ 50 ವರ್ಷಗಳ ಬಳಿಕ ಮತ್ತೊಂದು ಚಿತ್ರದಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ.
ಈ ಮಹಿಳೆಯರು ಬಾಂಗ್ಲಾ ವಿಮೋಜನೆ ಹೋರಾಟದಲ್ಲಿ ಭಾಗಿಯಾಗಿದ್ದರು ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಇವರು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರ ಆಗಿದ್ದಾರೆ ಎಂದು ಹಲವರು ಉಲ್ಲೇಖಿಸಿದ್ದಾರೆ.
ವೈರಲ್ ಫೋಟೊ ಬಗ್ಗೆ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ತಂಡವು ಪರಿಶೀಲನೆ ನಡೆಸಿದೆ. ಇವರು ಸ್ವಾತಂತ್ರ್ಯ ಹೋರಾಟಗಾರರಲ್ಲ. ಇವರು ಹುಟ್ಟಿರುವುದೇ ಇಸ್ಲಾಂ ಧರ್ಮೀಯರಾಗಿ ಎಂದು ಬಾಂಗ್ಲಾದೇಶದ ಪತ್ರಕರ್ತರೊಬ್ಬರು ಸ್ಪಷ್ಟಪಡಿಸಿದ್ದಾರೆ. ಹಳ್ಳಿಗಳ ಭೇಟಿಗೆ ತೆರಳಿದ್ದಾಗ ಈ ಚಿತ್ರವನ್ನು ಸೆರೆಹಿಡಿಯಲಾಗಿತ್ತು ಎಂದು ಬಾಂಗ್ಲಾದೇಶದ ಅಫ್ರಿನಾ ಎಂಬುವರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.