ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್ ಆಗಿರುವ ಸಯ್ಯದ್ ಅಹ್ಮದ್ ಬುಖಾರಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂಬುದನ್ನು ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಬುಖಾರಿ ಅವರು ಸನಾತನಿ ಆದರೇ? ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯ’ ಎಂದು ಚಿತ್ರದ ಜೊತೆ ಹೇಳಲಾಗಿದೆ. ಚಿತ್ರದಲ್ಲಿ ಬುಖಾರಿ ಅವರ ಜೊತೆ ದೆಹಲಿಯ ಬಿಜೆಪಿ ಸಂಸದ ಹರ್ಷವರ್ಧನ್ ಅವರು ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಹಾಗೂ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಹಾಕಲಾಗಿದೆ. ಆದರೆ ಇದು ಸುಳ್ಳು ಸುದ್ದಿ.
ಬುಖಾರಿ ಅವರು ಬಿಜೆಪಿ ಸೇರಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಪಿಟಿಐ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ. ಜಾಮಾ ಮಸೀದಿಯಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿಗೆ ಅಡಿjaಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಬುಖಾರಿ ಹಾಗೂ ಹರ್ಷವರ್ಧನ್ ಭಾಗಿಯಾಗಿದ್ದರು. ಸಂಸದರ ನಿಧಿಯ ಅಡಿಯಲ್ಲಿ ಶೌಚಾಲಯ ನಿರ್ಮಾಣವಾಗುತ್ತಿದೆ. ಮೋದಿ ಹಾಗೂ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಹಾಕಿರುವುದನ್ನು ತಪ್ಪಾಗಿ ಅರ್ಥೈಸಿ, ಬುಖಾರಿ ಅವರು ಬಿಜೆಪಿ ಸೇರಿದ್ದಾರೆ ಎಂದು ಬಿಂಬಿಸಲಾಗಿದೆ. ಜಾಮಾ ಮಸೀದಿ ಕೂಡಾ ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿಹಾಕಿದೆ ಎಂದು ಪಿಟಿಐ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.