ಮಂಗಳವಾರ, ಮಾರ್ಚ್ 28, 2023
23 °C

fact check| ಉದ್ವಿಗ್ನತೆಯಿಂದಾಗಿ ಊರು ತೊರೆಯುತ್ತಿದ್ದಾರೆಯೇ ಗಡಿ ಗ್ರಾಮಸ್ಥರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತ–ಚೀನಾ ನಡುವೆ ಗಡಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಮೆಕ್‌ಮೋಹನ್ ರೇಖೆಯ‌ ಉದ್ದಕ್ಕೂ ಇದರ ಪ್ರಭಾವ ಕಂಡುಬರುತ್ತಿದೆ. ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಹಾದುಹೋಗಿರುವ ಗಡಿರೇಖೆಯ ಗ್ರಾಮಸ್ಥರು ಊರುಗಳನ್ನು ತೊರೆಯುತ್ತಿದ್ದಾರೆ. ಜಿಲ್ಲಾಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿರುವ ಟಕ್ಸಂಗ್ ಎಂಬ ಗ್ರಾಮದ ಜನರು ಇತ್ತೀಚೆಗೆ ಊರು ತೊರೆದು ಸುರಕ್ಷಿತ ಸ್ಥಳಗಳಗೆ ತೆರಳಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. 

‍ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳ ನಡುವೆ ಬಿಕ್ಕಟ್ಟು ಇದೆ ಎಂಬ ವರದಿ ನಿಜ. ಆದರೆ ಈ ಕಾರಣದಿಂದ ಗಡಿ ಭಾಗದ ಗ್ರಾಮಸ್ಥರು ಊರು ತೊರೆಯುತ್ತಿದ್ದಾರೆ ಎಂಬ ವರದಿ ಸತ್ಯಕ್ಕೆ ದೂರವಾದುದು ಎಂದು ಪಿಐಬಿ ಫ್ಯಾಕ್ಟ್‌ ಚೆಕ್ ಘಟಕ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು